ಕಾಳುಮೆಣಸು ಬರಿ ಅಡುಗೆಗೆ ಮಾತ್ರವಲ್ಲ ಹಲವು ಬೇನೆಗಳ ನಿವಾರಣೆಗೆ ಸಹಾಯಕವಾಗಿದೆ. ಅತಿಯಾದ ಕೆಮ್ಮು ನಿವಾರಣೆಗೆ ಒಂದು ಚಿಟಿಕೆ ಅಷ್ಟು ಕಾಳುಮೆಣಸಿನ ಪುಡಿಯನ್ನು ಒಂದು ಚಮಚ ಜೇನು ತುಪ್ಪ ಬೆರಸಿ ದಿನಕ್ಕೆ ಮೂರೂ ಬಾರಿಯಂತೆ ಸೇವಿಸಿದರೆ ಕೆಮ್ಮು ನಿವಾರಣೆಯಾಗುತ್ತದೆ.
ಈ ಸರಳವಾದ ವಿಧಾನವನ್ನು ಬಳಸಿ ಕೆಮ್ಮು ನಿವಾರಣೆ ಮಾಡಿಕೊಳ್ಳಿ. ಕೆಮ್ಮು ಇದ್ದಾಗ ಹಲವು ಮಾತ್ರೆ ಔಷಧಿಗಳನ್ನು ಪಡೆಯುವ ಬದಲು ನೈಸರ್ಗಿಕವಾದ ಈ ಮನೆಮದ್ದನ್ನು ಬಳಸಿ ನಿಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇಟ್ಟುಕೊಳ್ಳಿ.
ಕಫ ಮತ್ತು ಶೀತಜ್ವರದಲ್ಲಿ: ಅನೇಕರಿಗೆ ಮಳೆಯಲ್ಲಿ ನೆನೆಯುವುದರಿಂದ ಶೀತ, ನೆಗಡಿ, ಕೆಮ್ಮು, ತಲೆನೋವು, ಜ್ವರ ಉಂಟಾಗುತ್ತದೆ. ಆಗ ಮೆಣಸು, ಶುಂಠಿ, ಜೀರಿಗೆಗಳನ್ನು 1:2:3ರ ಪ್ರಮಾಣದಲ್ಲಿ ಸೇರಿಸಿ ಕಷಾಯವನ್ನು ತಯಾರಿಸಿ ಅದಕ್ಕೆ ಬೆಲ್ಲ ಸೇರಿಸಿ ತೆಗೆದುಕೊಂಡರೆ, ಕಫ ಮತ್ತು ಶೀತದಿಂದ ಉಂಟಾದ ಜ್ವರ ಕಡಿಮೆಯಾಗುತ್ತದೆ. ಕೆಲವು ವೇಳೆ ಅಸಾಕ್ಮ್ಯ(ಅಲರ್ಜಿ) ಯಿಂದ ಗಂಟಲು ಕೆರತ, ಕೆಮ್ಮುಗಳು ಉಂಟಾಗುತ್ತದೆ. ಶೀತದಿಂದ ಹೆಚ್ಚಾಗುವ ಈ ಕೆಮ್ಮು ರಾತ್ರಿಯಲ್ಲಿ ಉಲ್ಬಣಗೊಂಡು ನಿದ್ದೆಗೆ ತೊಂದರೆಯನ್ನುಂಟುಮಾಡುತ್ತದೆ. ಆಗ ಎರಡು ಮೆಣಸಿನಕಾಳನ್ನು ಒಂದೆರಡು ಹರಳು ಉಪ್ಪನ್ನು ಸೇರಿಸಿ ದವಡೆಯಲ್ಲಿ ಇಟ್ಟುಕೊಂಡು ರಸವನ್ನು ನುಂಗುತ್ತಿದ್ದರೆ ಗಂಟಲು ಕಡಿಮೆಯಾಗಿ ಕೆಮ್ಮು ನಿಲ್ಲುತ್ತದೆ. ರಾತ್ರಿ ಚೆನ್ನಾಗಿ ನಿದ್ದೆ ಬರುತ್ತದೆ.
ಪೀನಸ ರೋಗದಲ್ಲಿ: ನೆಗಡಿ ಮತ್ತ ಶೀತ ಉಂಟಾಗಿ ಬಹಳ ದಿನಗಳವರೆಗೆ ವಾಸಿಯಾಗದಿದ್ದರೆ ಹಾಗೂ ಮೂಗಿನಿಂದ ಗಟ್ಟಿಯಾದ ಸಿಂಬಳ ಸೋರುವುದು, ಮೂಗು ಕಟ್ಟಿ ಉಸಿರಾಟಕ್ಕೆ ತೊಂದರೆ ಮತ್ತು ಕಣ್ಣಿನ ಉಬ್ಬಿನ ಜಾಗ್ರದಲ್ಲಿ ನೋವು, ಭಾರ ಮುಂತಾದ ಲಕ್ಷಣಗಳು ಕಂಡುಬರುತ್ತವೆ. ಇದನ್ನು ದುಷ್ಟಪೀನಸ ಎಂದು ಕರೆಯುತ್ತಾರೆ. ಈ ರೋಗ ಹಳೆಯದಾದಾಗ ಮೂಗಿಗೆ ವಾಸನೆ ಸಹ ಗೊತ್ತಾಗುವುದಿಲ್ಲ. ಇಂತಹ ಸಮಯದಲ್ಲಿ ಕಾಲು ಮೆಣಸಿನ ಚೂರ್ಣವನ್ನು ಬೆಲ್ಲ ಮತ್ತು ಹಸುವಿನ ಮೊಸರಿನಲ್ಲಿ ಸೇವಿಸುವುದರಿಂದ ಉತ್ತಮ ಲಾಭ ಸಿಗುತ್ತದೆ.
ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.