ಈ ಯೋಜನೆಯಡಿ ದೇಶದ ಮಹಿಳೆಯರಿಗೆ ಸರ್ಕಾರ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡುತ್ತಿದೆ. ದೇಶದ ಮಹಿಳೆಯರು ಪ್ರಧಾನ ಮಂತ್ರಿಯವರ ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನವನ್ನು ಅರ್ಜಿಯನ್ನು ಸಲ್ಲಿಸುವ ಮೂಲಕ ಪಡೆಯಬಹುದು. ಮೊದಲು ಗಂಡಸರು ಮಾತ್ರ ಕೆಲಸಕ್ಕೆ ಹೋಗಿ ದುಡಿಯಬೇಕು. ಹೆಂಗಸರು ಮನೆಯಲ್ಲೇ ಇರಬೇಕಿತ್ತು. ಆದರೆ, ಈಗ ಹಂಗಲ್ಲ. ಹೆಂಗಸರು ಎಲ್ಲಾ ಕಡೆಯಲ್ಲೂ ಕಾಲಿಟ್ಟಿದ್ದಾರೆ. ಗಂಡು, ಹೆಣ್ಣು ಒಂದೇ ಎಂದು ಸಮನಾಗಿ ದುಡಿಯುತ್ತಿದ್ದಾರೆ. ಅದೆಷ್ಟೋ ಹೆಣ್ಣು ಮಕ್ಕಳು ಹೊರಗೆ ಹೋಗಿ ದುಡಿದು ಕುಟುಂಬವನ್ನು ಮುನ್ನೆಡಿಸಿಕೊಂಡು ಹೋಗುತ್ತಿದ್ದಾರೆ. ಇದು ನಿಜಕ್ಕೂ ಹೆಮ್ಮೆಯ ವಿಷಯ. ಹೆಣ್ಣು ಮಕ್ಕಳಿಗೆ ಉದ್ಯೋಗ ಕಲ್ಪಿಸಲು ಸರ್ಕಾರ ಕೂಡ ಸಹಾಯ ಮಾಡುತ್ತೆ.
ಇವರಿಗಾಗಿಯೇ ಈಗಾಗಲೇ ಹಲವಾರು ಯೋಜನೆ ಗಳನ್ನು ತಂದಿದೆ. ಈಗಲೂ ಹೊಸ ಹೊಸ ಯೋಜನೆಗಳನ್ನು ತಂದು ಹೆಣ್ಣು ಮಕ್ಕಳಿಗೆ ಉತ್ತೇಜಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ದೇಶದ ಮಹಿಳೆಯರು ಸಬಲರಾಗಬೇಕೆಂಬುದು ಸರ್ಕಾರದ ಪ್ರಯತ್ನ. ಮಹಿಳೆಯರನ್ನು ಸ್ಕ್ಯಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಪಧಾನಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಚಾಲನೆ ನೀಡಿದೆ. ಈ ಯೋಜನೆಯಡಿ ದೇಶದ ಮಹಿಳೆಯರಿಗೆ ಸರ್ಕಾರ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡುತ್ತಿದೆ. ದೇಶದ ಮಹಿಳೆಯರು ಪ್ರಧಾನ ಮಂತ್ರಿಯವರ ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನವನ್ನು ಅರ್ಜಿಯನ್ನು ಸಲ್ಲಿಸುವ ಮೂಲಕ ಪಡೆಯಬಹುದು. ಹಾಗಿದ್ದರೆ ಯಾರಿಗೆಲ್ಲ ಈ ಯೋಜನೆಯ ಪ್ರಯೋಜನಗಳು ಸಿಗುತ್ತೆ? ಈ ಯೋಜನೆಯ ಪ್ರಯೋಜನೆ ಪಡೆದುಕೊಳ್ಳುವುದು ಹೇಗೆ? ಈ ಎಲ್ಲಾ ಮಾಹಿತಿಗಳು ಇಲ್ಲಿದೆ.
ದೇಶದ ಪ್ರತಿ ರಾಜ್ಯದ 50 ಸಾವಿರ ಮಹಿಳೆಯರಿಗಾಗಿ ಕೇಂದ್ರ ಸರ್ಕಾರದ ಈ ಯೋಜನೆ ಸಿದ್ಧಪಡಿಸಲಾಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಮಹಿಳೆಯರ ವಯಸ್ಸು 20 ರಿಂದ 40 ವರ್ಷಗಳಾಗಿರಬೇಕು. ಅರ್ಜಿ ಸಲ್ಲಿಸಿದ ನಂತರ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ದೊರೆಯಲಿದೆ. PM ಉಚಿತ ಹೊಲಿಗೆ ಯಂತ್ರ ಯೋಜನೆ ಪುಸ್ತುತ ದೇಶದ ಕೆಲವೇ ರಾಜ್ಯಗಳಲ್ಲಿ ಚಾಲನೆಯಲ್ಲಿದೆ. ಈ ರಾಜ್ಯಗಳಲ್ಲಿ ಕರ್ನಾಟಕ, ಹರಿಯಾಣ, ಗುಜರಾತ್, ಮಹಾರಾಷ್ಟ್ರ, ಬಿಹಾರ, ಉತ್ತರ ಪುದೇಶ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ್ದಲ್ಲಿ ಇದೆ. ಈ ಯೋಜನೆಗೆ ಅರ್ಜಿ ಹೇಗೆ ಸಲ್ಲಿಸಬೇಕು? ಈ ಬಗ್ಗೆ ಇಲ್ಲಿದೆ ನೋಡಿ.
ಅರ್ಜಿದಾರರು ಭಾರತದ ನಾಗರಿಕರಾಗಿರಬೇಕು. ದೇಶದ ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರು ಮಾತ್ರ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತದೆ.ಮಹಿಳಾ ಅರ್ಜಿದಾರರ ಪತಿಯ ವಾರ್ಷಿಕ ಆದಾಯ ರೂ. 12 ಸಾವಿರ ಮೀರಬಾರದು. ವಿಧವೆಯರು ಮತ್ತು ದಿವ್ಯಾಂಗ್ ಮಹಿಳೆಯರು ಸಹ ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು ಮತ್ತು ಪ್ರಯೋಜನ ಪಡೆಯಬಹುದು. ಈ ಯೋಜನೆಯ ಲಾಭವನ್ನು ಹಳ್ಳಿ ಮತ್ತು ನಗರಗಳ ಮಹಿಳೆಯರು ಪಡೆಯುತ್ತಾರೆ. ಇದಕ್ಕಾಗಿ ನೀವು ಆನ್ಲೈನ್ನಲ್ಲಿಯೂ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸಿದರೆ, ಮೊದಲು ಅದರ ಅಧಿಕೃತ ವೆಬ್ ಸೈಟ್ WWW.india.gov.in ಗೆ ಭೇಟಿ ನೀಡಬೇಕು.
ನಿಮ್ಮ ದಾಖಲೆಗಳನ್ನು ನೀವು ನೀಡಬೇಕು. ನಂತರ ಫಾರ್ಮ್ ಅನ್ನು ಸಂಬಂಧಪಟ್ಟ ಕಚೇರಿಗೆ ಸಲ್ಲಿಸಿ.ಜನ್ಮ ದಿನಾಂಕ ಪುಮಾಣಪತ್ರ, ಆದಾಯ ಪ್ರಮಾಣಪತ್ರ, ಮೊಬೈಲ್ ಸಂಖ್ಯೆ ಪಾಸ್ಪೋರ್ಟ್ ಗಾತ್ರದ ಫೋಟೋ, ನೀಡಬೇಕು. ನಿಮ್ಮ ಅರ್ಜಿಯನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತದೆ. ನೀವು ನೀಡಿದ ಎಲ್ಲಾ ಮಾಹಿತಿಯು ಸರಿಯಾಗಿದ್ದರೆ ನಿಮಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ನೀಡಲಾಗುವುದು.