ನೀವೇನಾದರೂ ನಿಮ್ಮ ತೂಕವನ್ನು ಕಡಿಮೆಮಾಡಿಕೊಳ್ಳಬೇಕು ಎಂದುಕೊಂಡಿದ್ದರೆ, ಇದು ಸುಲಭ ಉಪಾಯ. ಪ್ರತಿನಿತ್ಯ ಬೆಳಿಗ್ಗೆ ಒಂದು ಲೋಟ ಬಿಸಿನೀರಿಗೆ ನಿಬೆ ಹಣ್ಣಿನ ರಸ ಹಾಕಿ ಕುಡಿಯಿರಿ. ದಿನಕ್ಕೆ ಎರಡು ಬಾರಿಯಾದರೂ ನಿಂಬೆರಸ ಮತ್ತು ಜೇನುತುಪ್ಪ ಮಿಶ್ರಿತ ನೀರು ಸೇವನೆ ಮತ್ತು ಗಂಟೆಗೊಮ್ಮೆ ಒಂದು ಲೋಟ ನೀರು ಕುಡಿದರೆ, ಉತ್ತಮ ಫಲಿತಾಂಶ ಕಾಣಬಹುದು. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ. ಇನ್ನು ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಪೆಕ್ಟಿನ್ ಫೈಬರ್ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ. ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರಾಗುತ್ತದೆ.
ಬ್ಯಾಕ್ಟೀರಿಯಾದಿಂದ ಉಂಟಾಗುವ ಉದರ ಸಂಬಂಧಿ ರೋಗಗಳಿಗೆ ನಿಂಬೆ ಹಣ್ಣು ರಾಮಭಾಣ. ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ. ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ. ನಿಂಬೆ ಹಣ್ಣಿಗೆ ಒಂದು ಹನಿ ಜೇನುತುಪ್ಪ ಬೆರೆಸಿ, ಮುಖಕ್ಕೆ ಹಚ್ಚಿ 15 ನಿಮಿಷಗಳ ನಂತರ ತೊಳೆದರೆ ಮುಖದ ಮೇಲಿನ ಕಪ್ಪು ಕಲೆಗಳು ಮಾಯವಾಗಿ, ಚರ್ಮ ಕಾಂತಿಯುತವಾಗಿರುತ್ತದೆ. ಡೆಡ್ ಸ್ಕಿನ್ ತೆಗೆಯಲು ನಿಂಬೆ ಹಣ್ಣು ಉತ್ತಮ ಔಷಧ. ಮಧುಮೇಹ ಸಂಬಂಧಿ ಕಣ್ಣಿನ ರೋಗಗಳನ್ನು ನಿವಾರಿಸುವುದರೊಂದಿಗೆ, ನಿಂಬೆ ಹಣ್ಣಿನಲ್ಲಿರುವ ಹೆಸ್ಪರ್ಟಿನ್ ಎಂಬ ರಾಸಾಯನಿಕ ರಕ್ತದಲ್ಲಿರುವ ಸಕ್ಕರೆಯ ಅಂಶ ಸಕ್ಕರೆಯ ಪ್ರಮಾಣವು ರಕ್ತದಲ್ಲಿ ಹೆಚ್ಚು ಇದ್ದಾಗ ವನ್ನು ಸಹ ಕಡಿಮೆ ಮಾಡುತ್ತದೆ.
ಪ್ರತಿ ದಿನ ಕೇವಲ ನಿಂಬೆ ಹಣ್ಣಿನ ರಸ ಕುಡಿಯುವುದು ಬೇಸರವೆನಿಸಿದರೆ ಅದಕ್ಕೆ ಸ್ವಲ್ಪ ಪುದಿನ ಮತ್ತು ಹಸಿ ಜೇನು ತುಪ್ಪ ಬೆರೆಸಿ ಕುಡಿಯಬಹುದು. ಆದರೆ ನೆನಪಿರಲಿ ಯಾವುದೇ ಕಾರಣಕ್ಕೂ ಲೆಮನ್ ಜ್ಯೂಸ್ ಗೆ ಸಕ್ಕರೆ ಸೇರಿಸಬೇಡಿ.
ನಾವು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕೆನ್ನುವ ಹಲವಾರು ನೈಸರ್ಗಿಕ ಪಾನೀಯಗಳು ನಮ್ಮ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಪ್ರಯೋಜನಗಳನ್ನು ನಿಸ್ಸಂದೇಹವಾಗಿ ಒದಗಿಸಿ ಕೊಡುತ್ತವೆ. ಇದರಲ್ಲಿ ಲೆಮನ್ ಜ್ಯೂಸ್ ಕೂಡ ಒಂದು. ಈಗಿನ ಬೇಸಿಗೆ ಕಾಲದಲ್ಲಿ ಏನಿಲ್ಲದಿದ್ದರೂ ಪ್ರತಿಯೊಬ್ಬರ ಮನೆಯಲ್ಲಿ ನಿಂಬೆ ಹಣ್ಣು ಇರಲೇಬೇಕು. ನಿಂಬೆ ಹಣ್ಣು ಜೀವಕ್ಕೆ ತಂಪು ಮಾತ್ರವಲ್ಲದೆ ತನ್ನ ಅದ್ಭುತ ಗುಣ ಲಕ್ಷಣಗಳಿಂದ ಆರೋಗ್ಯಕ್ಕೆ ಹಲವಾರು ಲಾಭಗಳನ್ನು ತಂದುಕೊಡುತ್ತದೆ. ಪ್ರತಿ ದಿನ ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ನಿಂಬೆ ಹಣ್ಣಿನ ಜ್ಯೂಸ್ ಕುಡಿದರೆ ಬಹಳಷ್ಟು ಒಳ್ಳೆಯದು.
ನಿಂಬೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ದೇಹದಲ್ಲಿನ ದ್ರವ ರೂಪದ ಅಂಶಗಳು ಸಮತೋಲನಗೊಳ್ಳುತ್ತವೆ. ಇದರಿಂದಾಗಿ ನಿರ್ಜಲೀಕರಣದ ಸಮಸ್ಯೆಯನ್ನು ಪರಿಶೀಲಿಸಬಹುದು. ಇಡೀ ದಿನ ಹೊರಗೆ ಹೋಗಿ ಬಿಸಿಲಿನಲ್ಲಿ ಸಾಕಷ್ಟು ಸಮಯ ಕಳೆಯುವವರು ನಿಂಬೆ ಹಣ್ಣಿನ ಜ್ಯೂಸ್ ತೆಗೆದುಕೊಳ್ಳುವುದು ಉತ್ತಮ. ನಿಂಬೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಕೆಟ್ಟ ಉಸಿರಾಟವು ಕಡಿಮೆಯಾಗುತ್ತದೆ. ಅಂದರೆ ನಿಂಬೆ ರಸವು ಬಾಯಿಯನ್ನು ಸ್ವಚ್ಛವಾಗಿಡುವ ಮೂಲಕ, ಬಾಯಿಯಿಂದ ಹೊರ ಬರುವ ವಾಸನೆ ದೂರ ಮಾಡುತ್ತದೆ. ಅದರಲ್ಲೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ತೆಗೆದುಕೊಳ್ಳುವುದು ಸೂಕ್ತ.