ಡೈನಿಂಗ್ ಟೇಬಲ್ ಮೇಲೆ ಸ್ಪೂನ್ಸ್ ಪ್ರೊಗ್ಸ್ ಬಂದು ಕೈಯಲ್ಲಿ ಭೋಜನ ಸವಿಯುವವರನ್ನು ಅನಾಗರಿಕರ ತರಹ ನೋಡುವ ಕಾಲ ಇದು ತಿಂಡಿ ಏನೇ ಇದ್ದರೂ ಫೋರ್ಕ್ ಕಡ್ಡಾಯ ಎಂಬಂತಾಗಿದೆ. ಹೋಟೆಲ್ ನಲ್ಲಿ ಯಾರಾದರೂ ಕೈಯಲ್ಲಿ ಊಟ ಮಾಡುತ್ತಿದ್ದರೆ ಅವರನ್ನು ವಿಚಿತ್ರವಾಗಿ ನೋಡುವ ಮನೋಭಾವ ಇದೆ ಇನ್ನು ಮನೆಯಲ್ಲೂ ಅಷ್ಟೇ ಮಕ್ಕಳಿಗೆ ಸ್ಕೂಲ್ ಅಭ್ಯಾಸ ಮಾಡುತ್ತಿದ್ದಾರೆ ತಂದೆ ತಾಯಿ. ಅದಕ್ಕೆ ಅವರು ಕೊಡುತ್ತಿರುವ ಮುಖ್ಯ ಕಾರಣ ಕೈಗಳು ಸ್ವಚ್ಛವಾಗಿರಲ್ಲ ಅನ್ನೋದು ಆದರೆ ಒಮ್ಮೆ ಕೈಯಲ್ಲಿ ಊಟ ಮಾಡುವುದರಿಂದ ಆಗುವ ವೈಜ್ಞಾನಿಕ ಲಾಭಗಳನ್ನು ತಿಳಿದ ಮೇಲೆ ನೀವೇ ಕೈಯಿಂದಲೇ ಊಟ ಮಾಡೋಕೆ ಆರಂಭಿಸುತ್ತೀರಾ. ಕೈಯಲ್ಲಿ ಆಹಾರ ತಿನ್ನುವುದರಿಂದ ಆಗುವ ಪ್ರಯೋಜನಗಳು.

ಕೈಸ್ಪರ್ಶದಿಂದ ದೇಹದಲ್ಲಿ ಶಕ್ತಿ ಸಂಚಯವಾಗುತ್ತದೆ ಕೈಯಲ್ಲಿ ಆಹಾರ ತಿನ್ನುವುದರಿಂದ ಕೆಲವು ಮಿಲಿಯನ್ ನರಗಳು ನಮ್ಮ ಮೆದುಳಿಗೆ ಸಂಕೇತ ಕಳುಹಿಸುತ್ತವಂತೆ ಆಹಾರವನ್ನು ಕೈಯಲ್ಲಿ ಸ್ಪರ್ಶಿಸುತ್ತಿದ್ದಂತೆ ಆಹಾರ ತೆಗೆದುಕೊಳ್ಳುವ ವಿಷಯ ಮೆದುಳು ಉದರಕ್ಕೆ ಸಂಕೇತ ರವಾನಿಸುತ್ತದೆ. ಆಗ ಹೊಟ್ಟೆಯಲ್ಲಿ ಜೀರ್ಣ ರಸಗಳು ಎಂಜೈಮ್ಗಳು ಬಿಡುಗಡೆಯಾಗಿ ಜೀರ್ಣಕ್ರಿಯೆ ಸುಗಮವಾಗಿ ಆಗುತ್ತದೆ. ಕೈಯಲ್ಲಿ ಆಹಾರ ತೆಗೆದುಕೊಳ್ಳುವುದರಿಂದ ಆರೋಗ್ಯಕರವಾಗಿರುವುದಷ್ಟೇ ಅಲ್ಲದೆ ಯಾವುದೇ ಆಲೋಚನೆಗಳು ಬರದೇ ಒಂದೇ ಆಲೋಚನೆಯಲ್ಲಿ ಇರುತ್ತೇವೆ. ನಮ್ಮ ಆಹಾರದಲ್ಲಿ ಎಣ್ಣೆಯನ್ನು ಹೆಚ್ಚಾಗಿ ಬಳಸುತ್ತೇವೆ. ಹೀಗೆ ತಯಾರಿಸಿದ ಆಹಾರವನ್ನು ಸ್ಪೂನ್ಸ್ ಫೋರ್ಸ್ ನಿಂದ ತಿನ್ನುವುದರಿಂದ ಪ್ರತಿಕ್ರಿಯೆ ಏರ್ಪಟ್ಟು ರುಚಿ ಕೆಡುತ್ತದೆ. ಕೈಬೆರಳಲ್ಲಿ ಆಹಾರವನ್ನು ಕಲಸಿಕೊಂಡು ಒಂದೊಂದೇ ತುತ್ತು ತಿನ್ನುವುದರಿಂದ ರಕ್ತ ಸಂಚಾರ ಚೆನ್ನಾಗಿ ಆಗುತ್ತದೆ. ಕೈ ಬೆರಳಲ್ಲಿ ಆಹಾರ ತೆಗೆದುಕೊಳ್ಳುವುದರಿಂದ ಬೆರಳು ತುಟಿಗೆ ತಾಗುತ್ತಿದ್ದಂತೆ ಬಾಯಲ್ಲಿ ಲಾಲಾರಸ ಉತ್ಪನ್ನವಾಗುತ್ತದೆ. ಇನ್ನು ಕೈ ಬೆರಳಲ್ಲಿ ಆಹಾರ ತೆಗೆದುಕೊಳ್ಳುವುದರಿಂದ ಅನಾರೋಗ್ಯ ಪಾಲಾಗದೆ ಆರೋಗ್ಯವಾಗಿರುತ್ತೇವೆ ಚೆನ್ನಾಗಿ ನಡೆಯುತ್ತದೆ ಇದು ಒಂದು ರೀತಿ ವ್ಯಾಯಾಮದಂತಿರುತ್ತದೆ.

Leave a Reply

Your email address will not be published. Required fields are marked *