ನಮಸ್ತೆ ಪ್ರಿಯ ಓದುಗರೇ, ಇವತ್ತಿನ ಲೇಖನದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಂದ್ರೆ ನರೇಗಾ MGNREGA ಯೋಜನೆ ಬಗ್ಗೆ ಒಂದಿಷ್ಟು ಮಾಹಿತಿಯನ್ನು ತಿಳಿದುಕೊಳ್ಳೋಣ. ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಒದಗಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ಗ್ರಾಮೀಣ ಭಾಗದ ಜನರ ಬಡತನ ನಿರ್ಮೂಲನೆ ಮಾಡುವುದು ಈ ಯೋಜನೆಯ ಉದ್ದೇಶ ಆಗಿದೆ. ಒಂದು ವರ್ಷದಲ್ಲಿ ನೂರು ದಿನಗಳ ಕಾಲ ಸ್ಥಳೀಯವಾಗಿ ಉದ್ಯೋಗವನ್ನು ಸೃಷ್ಟಿಸಿ ಗ್ರಾಮೀಣ ಭಾಗದ ಜನರು ಉತ್ತಮ ಜೀವನ ನಡೆಸಲು ಅವಕಾಶ ಕಲ್ಪಿಸುವ ಮಹತ್ತರವಾದ ಯೋಜನೆ ಇದಾಗಿದೆ. ಗ್ರಾಮೀಣ ಭಾಗದಲ್ಲಿ ಸಂಪನ್ಮೂಲ ಅಭಿವೃದ್ಧಿ ಗೊ ಈ ಯೋಜನೆ ಪೂರಕವಾಗಲಿದೆ. ಈ ಯೋಜನೆ ಮೂಲಕ ಉದ್ಯೋಗ ಪಡೆದುಕೊಳ್ಳಬೇಕು ಎಂದರೆ ಮೊದಲು ಸ್ಥಳೀಯ ಗ್ರಾಮ ಪಂಚಾಯತಿ ಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಇದಕ್ಕಾಗಿ ಮಾಡಬೇಕಾಗಿರುವುದು ಇಷ್ಟೇ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್ ಮುಂತಾದ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಒಂದು ಬಾರಿ ಎಲ್ಲಾ ಮೂಲ ದಾಖಲಾತಿಗಳನ್ನು ಸಲ್ಲಿಸಿದ ನಂತರ 15 ದಿನಗಳಲ್ಲಿ ಅರ್ಜಿದಾರರಿಗೆ ನರೇಗಾ ಜಾಬ್ ಕಾರ್ಡ್ ನೀಡಲಾಗುತ್ತದೆ. ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ 15 ದಿನಗಳಲ್ಲಿ ಕೆಲಸ ಒದಗಿಸುವುದು ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜವಾಬ್ದಾರಿ ಆಗಿರುತ್ತದೆ. ಇನ್ನೂ ಈ ಯೋಜನೆಯಲ್ಲಿ ಕಾರ್ಯ ನಿರ್ವಹಿಸುವ ಪುರುಷರು ಮತ್ತು ಮಹಿಳೆಯರೀಗೆ ಸಮಾನ ವೇತನ ವ್ಯವಸ್ಥೆ ಇದೆ. ಯಾವುದೇ ಸಂದರ್ಭದಲ್ಲಿ ಮಾಡಿದ ಕೆಲಸಕ್ಕೆ ಕೂಲಿಯನ್ನು 15 ದಿನಗಳಲ್ಲಿ ಫಲಾನುಭವಿಗಳಿಗೆ ನೀಡುವುದು ಪಂಚಾಯತ್ ನ ಕರ್ತವ್ಯ ಆಗಿದೆ.

ಹಾಗೆಯೇ ಕೂಲಿಯ ವೇತನವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು. ಒಂದು ದಿನದ ಕೂಲಿ ಪಡೆಯಲು ಮಾಡಬೇಕಾದ ಕೆಲಸದ ಪ್ರಮಾಣ ಹಾಗೆ ಕೆಲಸದ ಅವಧಿ, ಯೋಜನೆಯಲ್ಲಿ ದೊರೆಯುವ ವೈಯಕ್ತಿಕ ಸೌಲಭ್ಯಗಳು, ಮತ್ತು ಅರ್ಹತೆಗಳನ್ನು ನಿಗದಿ ಪಡಿಸಲಾಗಿದೆ. ಇದರಲ್ಲಿ ವಿಶೇಷ ಏನೆಂದರೆ ಕಾಮಗಾರಿ ಪ್ರಮಾಣದಲ್ಲಿ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಚೇತನರಿಗೆ ಶೇಕಡಾ 50% ರಷ್ಟು ರಿಯಾಯಿತಿಯನ್ನು ನೀಡಲಾಗಿದೆ. ಕಾಮಗಾರಿ ಸ್ಥಳದಲ್ಲಿ ಅಗತ್ಯ ಸೌಲಭ್ಯಗಳನ್ನು ಸಹ ಫಲಾನುಭವಿಗಳಿಗೆ ಈ ಯೋಜನೆ ಮೂಲಕ ಒದಗಿಸಲಾಗುತ್ತದೆ. ನೊಂಡಿದ್ರಲ್ವಾ ಸ್ನೇಹಿತರೆ ಕೇಂದ್ರದ ಪ್ರಧಾನಿ ಮೋದಿ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಜಾರಿಗೊಳಿಸಿದ ಮಹತ್ವಾಕಾಂಕ್ಷಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು. ಈ ಯೋಜನೆಯ ಲಾಭವನ್ನು ಪಡೆಯಲು ಮರೆಯದಿರಿ ಸ್ನೇಹಿತರೆ. ಈ ಮಾಹಿತಿ ನಿಮಗೆ ಪ್ರಯೋಜನಕಾರಿ ಎನ್ನಿಸಿದರೆ ದಯವಿಟ್ಟು ಲೈಕ್ ಮಾಡಿ ಶೇರ್ ಮಾಡಿ. ಶುಭದಿನ.

Leave a Reply

Your email address will not be published. Required fields are marked *