WhatsApp Group Join Now

ತೆಂಗಿನ ಎಣ್ಣೆ : ತೆಂಗಿನ ಎಣ್ಣೆಯನ್ನು ಮೊದಲು ಬಿಸಿ ಮಾಡಿ ನಂತರ ನಿಮ್ಮ ತ್ವಚೆಗೆ ಹಚ್ಚಿ ಒಂದು ರಾತ್ರಿ ಪುರ ಬಿಡಿ, ನಂತರ ಮುಂಜಾನೆ ಉಗುರು ಬೆಚ್ಚಗಿನ ನೀರಿನಲ್ಲಿ ಸ್ನಾನ ಮಾಡಿ, ಎಣ್ಣೆ ಹಚ್ಚಿದಾಗ ಕಾಟನ್ ಬಟ್ಟೆ ಧರಿಸಿ.

ನಿಂಬೆ ರಸ ಮತ್ತು ತೆಂಗಿನೆಣ್ಣೆ : ನಿಂಬೆ ರಸ ಮತ್ತು ತೆಂಗಿನೆಣ್ಣೆಯನ್ನು ಮಿಶ್ರ ಮಾಡಿ ರಾತ್ರಿಯಲ್ಲಿ ಮೈಗೆ ಹಚ್ಚಿ ಬೆಳಗ್ಗೆ ಸ್ನಾನ ಮಾಡಬೇಕು, ಈ ರೀತಿ ಮಾಡುತ್ತಿದ್ದರೆ ಅಲರ್ಜಿ ಸಮಸ್ಯೆ ನಿವಾರಣೆಯಾಗುವುದು.

ಕಹಿ ಬೇವಿನ ಮಿಶ್ರಣ : ಕಹಿ ಬೇವಿನ ಎಲೆಯನ್ನು ಚೆನ್ನಾಗಿ ಅರೆದು ಮೈಗೆ ಹಚ್ಚಬೇಕು, ಅರ್ಧ ಗಂಟೆ ಬಳಿಕ ತಣ್ಣೀರಿನಲ್ಲಿ ಸ್ನಾನ ಮಾಡಬೇಕು ಅಲರ್ಜಿ ಇದ್ದರೂ, ಇಲ್ಲದಿದ್ದರೂ ಕಹಿ ಬೇವಿನ ಎಲೆಯನ್ನು ಸ್ನಾನ ಮಾಡುವ ನೀರಿಗೆ ಹಾಕುವುದು ಒಳ್ಳೆಯದು.

ಗಸೆಗಸೆ ಮತ್ತು ನಿಂಬೆ ರಸ : ಗಸೆಗಸೆಯನ್ನು ಅರೆದು ಅದಕ್ಕೆ ಸ್ವಲ್ಪ ನಿಂಬೆ ರಸ ಹಾಕಿ ಅದನ್ನು ಅಲರ್ಜಿಯಿಂದ ಉಂಟಾದ ಗಾಯಕ್ಕೆ ಹಚ್ಚಿದರೆ ಅಲರ್ಜಿಯಿಂದ ಉಂಟಾಗಿರುವ ಗಾಯವನ್ನು ಒಣಗುತ್ತದೆ.

ತಣ್ಣೀರು ಸ್ನಾನ : ತಣ್ಣೀರಿನಲ್ಲಿ ಸ್ನಾನ ಮಾಡುವುದು ಅಲರ್ಜಿ ಸಮಸ್ಯೆ ನಿವಾರಣೆಗೆ ಮತ್ತು ಆರೋಗ್ಯಕ್ಕೆ ಒಳ್ಳೆಯದು ತ್ವಚೆ ಅಲರ್ಜಿ ಉಂಟಾಗಿದ್ದರೆ ಬಿಸಿ ನೀರಿನಲ್ಲಿ ಸ್ನಾನ ಮಾಡದಿರುವುದು ಒಳ್ಳೆಯದು, ಬಿಸಿ ನೀರಿನಲ್ಲಿ ಸ್ನಾನ ಮಾಡಿದರೆ ಗಾಯದ ಉರಿ ಹೆಚ್ಚಾಗುತ್ತದೆ.

ಹಾಗಲಕಾಯಿಯನ್ನು ಭೇದಿ, ಉದರಶೂಲೆ, ಜ್ವರಗಳು, ಸುಟ್ಟಗಾಯಗಳು, ನೋವಿನಿಂದ ಕೂಡಿದ ರಜಃಸ್ರಾವ, ತುರಿಗಜ್ಜಿ ಹಾಗು ಚರ್ಮದ ಇತರ ಸಮಸ್ಯೆಗಳನ್ನು ಒಳಗೊಂಡಂತೆ ಹಲವಾರು ಇತರ ಅಸ್ವಸ್ಥತೆಗಳಿಗಾಗಿ ಸಾಂಪ್ರದಾಯಿಕ ಔಷಧ ಪದ್ಧತಿಯಲ್ಲಿ ಬಳಸಲಾಗುತ್ತದೆ ಇದನ್ನು ಸಂತಾನ ನಿಯಂತ್ರಣದಲ್ಲಿ ಗರ್ಭಸ್ರಾವಕವಾಗಿ, ಹಾಗು ಶಿಶುವಿನ ಜನನಕ್ಕೆ ಸಹಕಾರಿಯಾಗಲು ಸಹ ಬಳಸಲಾಗುತ್ತದೆ, ಕಣ್ಣು ಮತ್ತು ಚರ್ಮ ರೋಗಗಳು, ಗೌಟ್, ಮೂಲವ್ಯಾಧಿ ಹಾಗೂ ಉಸಿರಾಟದ ತೊಂದರೆಗಳನ್ನು ನಿಯಂತ್ರಿಸಬಲ್ಲದು, ಹಾಗಲಕಾಯಿ ಲಿವರ್ ಟಾನಿಕ್ ಆಗಿಯೂ ಕಾರ್ಯನಿರ್ವಹಿಸುತ್ತದೆ.

WhatsApp Group Join Now

Leave a Reply

Your email address will not be published. Required fields are marked *