ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ರಾಜ್ಯ ಸರ್ಕಾರ ಘೋಷಿಸಿರುವ ಬರ ಪೀಡಿತ ತಾಲೂಕುಗಳ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪೂರ್ಣ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಐದು ಕೆಜಿ ದವಸ ಮತ್ತು ಉಳಿದ ಐದು ಕೆಜಿ ಬದಲು ಹಣವನ್ನ ಪಡಿತರ ಚೀಟಿದಾರರ ಖಾತೆಗೆ ನೀಡಲಾಗುತ್ತಿದೆ.ಆದರೆ ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಆಗಿರುವ ಹಿನ್ನೆಲೆಯಲ್ಲಿ ಸುಮಾರು ನೂರಾ 14 ಕ್ಕೂ ಹೆಚ್ಚು ತಾಲೂಕುಗಳು ಬರದ ವ್ಯಾಪ್ತಿ ಗೆ ಬರುವ ಸಾಧ್ಯತೆ ಇದೆ. ಈ ತಾಲೂಕುಗಳ ಎಲ್ಲ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಐದು ಕೆಜಿಗೆ ಹಣ ನೀಡುವ ಬದಲು ಸಂಪೂರ್ಣ 10 ಕೆಜಿ ಅಕ್ಕಿ ವಿತರಣೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಮುಂದಿನ ಒಂದು ವಾರದಲ್ಲಿ ಅಕ್ಕಿ ಖರೀದಿ ವಿಚಾರ ಅಂತಿಮ ವಾಗಲಿದೆ. ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸ್‌ಗಡ ಸರ್ಕಾರಗಳು ನಮ್ಮ ರಾಜ್ಯಕ್ಕೆ ಅಕ್ಕಿ ನೀಡಲು ಮುಂದೆ ಬಂದಿವೆ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಬೆಲೆ ನಿಗದಿ ವಿಚಾರವಾಗಿ ಮಾತುಕತೆ ನಡೆಯುತ್ತಿದೆ. ಸರ್ಕಾರ ಬರ ತಾಲೂಕುಗಳ ಪಟ್ಟಿ ಘೋಷಿಸಿದ ಬಳಿಕ 10 ಕೆಜಿ ಅಕ್ಕಿ ಕೊಡುವ ಕೆಲಸ ಮಾಡುತ್ತೇವೆ ಎಂದರು. ಇನ್ನು ಉಚಿತ ಯೋಜನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟೀಕೆಗೆ ಪ್ರತಿಕ್ರಿಯಿಸಿದ ಸಚಿವ ಮುನಿಯಪ್ಪ, ದೇಶದಲ್ಲಿ ಶೇಕಡ ಮೂವತೈದು ರಿಂದ 37 ರಷ್ಟು ಜನ ಬಡತನ ರೇಖೆಗಿಂತ ಕೆಳಗಿದ್ದಾರೆ. ಯುಪಿಎ ಇದ್ದಾಗ ಯಾರೂ ಹಸಿವಿನಿಂದ ಬಳಲಬಾರದು ಎಂದು ಆಹಾರ ಭದ್ರತಾ ಕಾಯ್ದೆ ತರಲಾಗಿತ್ತು.ದುಡಿಯುವ ಕೈಗಳು ಕೆಲಸವಿಲ್ಲದೆ ಇರಬಾರದು ಎಂದು ನರೇಗಾ ಯೋಜನೆ ತಂದಿತು. ಈ ಎರಡು ಕಾಯ್ದೆಗಳಿಂದ ದೇಶದ ಜನರಿಗೆ ಸಾಕಷ್ಟು ಅನುಕೂಲವಾಗುತ್ತಿದೆ.
ಆದರೆ ಈಗಿನ ಬಿಜೆಪಿ ಸರ್ಕಾರ ಈ ಯೋಜನೆಗಳಿಗೆ ಅನುದಾನ ಕಡಿಮೆ ಮಾಡಿ ನಿರ್ಲಕ್ಷ ತೋರಿದೆ ಎಂದು ಆರೋಪಿಸಿದ ರು. ಬ್ಯಾಂಕ್ ಅಕೌಂಟ್ ಸಹಿತ ಪಡಿತರದಾರರು 21,00,000 ಪಡಿತರದಾರರಿಗೆ ಐದು ಕೆಜಿ ಪಡಿತರ ಬದಲು ಡಿಬಿಟಿ ಮೂಲಕ ಹಣ ನೀಡಲು ಬ್ಯಾಂಕ್ ಅಕೌಂಟ್ ಇಲ್ಲದ ವರಿಗೆ ಸರ್ಕಾರ ದಿಂದಲೇ ಅಕೌಂಟ್ ಮಾಡಲಾಗುತ್ತಿದೆ. ಇದರಲ್ಲಿ ಯಾರಿಗೂ ಅನ್ಯಾಯ ಆಗುತ್ತಿಲ್ಲ ಎಂದು ಇದೇ ವೇಳೆ ಸಚಿವ ಮುನಿಯಪ್ಪ ಸ್ಪಷ್ಟಪಡಿಸಿದರು. ಜುಲೈ ತಿಂಗಳ ಲ್ಲಿ 3.45 ಕೋಟಿ ಜನರಿಗೆ ಡಿಬಿಟಿ ಮಾಡಲಾಗಿದೆ. ಆಗಸ್ಟ್ ನಲ್ಲಿ 3.69 ಕೋಟಿ ಜನರಿಗೆ ಆರುನೂರು ಕೋಟಿ ರೂಪಾಯಿ ಡಿಬಿಟಿ ಮಾಡಲಾಗಿದೆ. ಬ್ಯಾಂಕ್ ಅಕೌಂಟ್ ಇಲ್ಲದ 21,00,000 ಪಡಿತರದಾರರಿದ್ದಾರೆ. 2,00,000 ಜನರಿಗೆ ನಾವೆ ಬ್ಯಾಂಕ್ ಅಕೌಂಟ್ ಮಾಡಿದ್ದೇವೆ.ಹಾಗಾಗಿ ಯಾರಿಗೂ ಅನ್ಯಾಯ ಆಗುವುದಿಲ್ಲ ಎಂದು ಹೇಳಿದರು.