ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ: ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣುಗಳಿಗೆ ಅಗತ್ಯವಾದ ಪೋಷಕಾಂಶಗಳಾಗಿದ್ದು ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು ನೆರವಾಗುತ್ತವೆ. ವಿಶೇಷವಾಗಿ ಈ ಪೋಷಕಾಂಶಗಳು ಕಣ್ಣಿನ ಪಾಪೆಯನ್ನು ಇನ್ನಷ್ಟು ಬಲಪಡಿಸುವ ಮೂಲಕ ಸ್ಪಷ್ಟವಾದ ದೃಷ್ಟಿ ಮತ್ತು ನೋಟವನ್ನು ಉತ್ತಮಗೊಳಿಸುತ್ತವೆ.

ಇದರಲ್ಲಿ ಅತಿ ಕಡಿಮೆ ಪರ್ಯಾಪ್ತ ಕೊಬ್ಬು ಹಾಗೂ ಅತಿ ಕಡಿಮೆ ಕ್ಯಾಲೋರಿಗಳಿರುವ ಕಾರಣ ತೂಕ ಏರದಿರಲು ನೆರವಾಗುತ್ತದೆ. ಅಲ್ಲದೇ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಕರಗುವ ನಾರು ಹೊಟ್ಟೆ ತುಂಬಿರುವ ಭಾವನೆಯನ್ನು ಮೂಡಿಸಿ ಹೊಟ್ಟೆಯ ಹಸಿವಿನ ಭಾವನೆ ಬರದಂತೆ ನೋಡಿಕೊಳ್ಳುತ್ತದೆ. ತನ್ಮೂಲಕ ಸೇವಿಸಬಹುದಾಗಿದ್ದ ಆಹಾರಸೇವನೆಯಿಂದ ತಡೆದು ತೂಕ ಏರದಂತೆ ಪರೋಕ್ಷವಾಗಿ ನೆರವಾಗುತ್ತದೆ.

ಮಧುಮೇಹವನ್ನು ನಿಯಂತ್ರಿಸುತ್ತದೆ: ಈ ಹಣ್ಣಿನ ನಿಯಮಿತ ಸೇವನೆಯಿಂದ ಮಧುಮೇಹ ಆವರಿಸುವ ಸಾಧ್ಯತೆಯನ್ನು ತಡವಾಗಿಸಬಹುದು. ಈ ಅದ್ಭುತ ಹಣ್ಣಿನಲ್ಲಿರುವ ಪೋಷಕಾಂಶಗಳು ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ಸಂತುಲಿತ ಪ್ರಮಾಣದಲ್ಲಿರಿಸಿ ಮಧುಮೇಹವನ್ನು ನಿಯಂತ್ರಿಸಲೂ ನೆರವಾಗುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಈ ಹಣ್ಣುಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆ ಹೊಂದಿದ್ದು ಇದಕ್ಕೆ ಈ ಹಣ್ಣಿನಲ್ಲಿರುವ ವಿಟಮಿನ್ ಸಿ ಪ್ರಮುಖ ಕಾರಣವಾಗಿದೆ. ಈ ಹಣ್ಣಿನ ಸೇವನೆಯಿಂದ ದೇಹದಲ್ಲಿ ಹೆಚ್ಚಿನ ಪ್ರಮಾಣದ ಬಿಳಿರಕ್ತಕಣಗಳನ್ನು ಉತ್ಪತ್ತಿಸಲು ಪ್ರಚೋದನೆ ದೊರಕುತ್ತದೆ. ಬಿಳಿರಕ್ತಕಣಗಳು ನಮ್ಮ ದೇಹವನ್ನು ರೋಗಾಣುಗಳಿಂದ ರಕ್ಷಿಸುವ ಸೈನಿಕರಾಗಿದ್ದು ಈ ಸೈನ್ಯ ಬಲವಾಗಿದ್ದಷ್ಟೂ ವೈರಿಗಳನ್ನು ಸದೆಬಡಿಯಲು ಸಾಧ್ಯವಾಗುತ್ತದೆ ಹಾಗೂ ಈ ಮೂಲಕ ಹಲವಾರು ಸೋಂಕುಗಳಿಂದ ರಕ್ಷಣೆ ಪಡೆಯುವಂತಾಗುತ್ತದೆ.

ಹೊಟ್ಟೆಯ ಹುಣ್ಣುಗಳನ್ನು ಗುಣಪಡಿಸುತ್ತದೆ: ಇದರಲ್ಲಿರುವ ವಿಟಮಿನ್ ಸಿ ಹೊಟ್ಟೆಯ ಹುಣ್ಣುಗಳನ್ನು ಗುಣಪಡಿಸಲು ನೆರವಾಗುತ್ತದೆ. ಅಲ್ಲದೇ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ನೀರಿನಂಶ ಹೊಟ್ಟೆಯ ಒಳಪದರದ ಆಮ್ಲೀಯತೆಯನ್ನು ಕಡಿಮೆಗೊಳಿಸಿ ಹೊಟ್ಟೆಯ ಉರಿಯನ್ನು ಇಲ್ಲವಾಗಿಸುತ್ತದೆ.

ಮಲಬದ್ಧತೆಯಿಂದ ರಕ್ಷಿಸುತ್ತದೆ: ಇದರಲ್ಲಿ ನೀರು ಮತ್ತು ಕರಗುವ ನಾರು ಅತ್ಯಂತ ಸಂತುಲಿತ ಅನುಪಾತದಲ್ಲಿವೆ. ಇದು ಮಲಬದ್ಧತೆಯ ತೊಂದರೆಯನ್ನು ಇಲ್ಲವಾಗಿಸಲು ಸೂಕ್ತವಾಗಿದೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ ಹಾಗೂ ಜೀರ್ಣಕ್ರಿಯೆಯ ತೊಂದರೆಗಳನ್ನು ನೈಸರ್ಗಿಕವಾಗಿ ಗುಣಪಡಿಸುತ್ತದೆ.

ಮೂತ್ರಪಿಂಡದಲ್ಲಿ ಕಲ್ಲುಗಳಾಗುವುದನ್ನು ತಡೆಯುತ್ತದೆ: ಈ ಹಣ್ಣಿನಲ್ಲಿರುವ ಆಕ್ಸಿಕೈನ್ ಎಂಬ ಪೋಷಕಾಂಶಕ್ಕೆ ಮೂತ್ರಪಿಂಡಗಳಲ್ಲಿರುವ ಕಲ್ಲುಗಳನ್ನು ನಿವಾರಿಸುವ ಶಕ್ತಿ ಇದೆ. ಕೇಸರಿ ಕರಬೂಜ ಹಣ್ಣಿನ ನಿಯಮಿತ ಸೇವನೆಯಿಂದ ಮೂತ್ರಪಿಂಡಗಳಲ್ಲಿರುವ ಕಲ್ಮಶಗಳು ನಿವಾರಣೆಯಾಗುವ ಮೂಲಕ ಇಲ್ಲಿ ಇನ್ನಷ್ಟು ಕಲ್ಲುಗಳಾಗುವುದರಿಂದ ರಕ್ಷಿಸುತ್ತದೆ.

Leave a Reply

Your email address will not be published. Required fields are marked *