ಸಾಮಾನ್ಯವಾಗಿ ನಮ್ಮ ಕಣ್ಣ ಮುಂದೆ ಹಲವು ರೀತಿಯ ಗಿಡಗಳು ಕಂಡುಬರುತ್ತವೆ ಆದ್ರೆ ಆ ಗಿಡದ ಲಾಭಗಳು ನಮಗೆ ತಿಳಿದಿರುವುದಿಲ್ಲ ಅಂತಹ ಗಿಡಗಳಲ್ಲಿ ಈ ಗಿಡ ಸಹ ಒಂದಾಗಿದೆ.
ಹೌದು ಇದು ಯಾವೆಲ್ಲ ರೀತಿಯ ಬೇನೆಗಳಿಗೆ ಮದ್ದಾಗಿ ಕೆಲಸ ಮಾಡುತ್ತದೆ ಅನ್ನೋದು ಇಲ್ಲಿದೆ ನೋಡಿ. ಮುಟ್ಟಿದರೆ ಮುನಿ ಸಸ್ಯದ ಎಲ್ಲಾ ಭಾಗವೂ ಮನೆ ಔಷಧಿ ತಯಾರಿಕೆಗೆ ಬಹಳ ಉಪಯುಕ್ತವಾದುದು. ಗಂಟಲು ಬಾವು ಮತ್ತು ಇತರೆ ಬಾವುಗಳಿಂದ ತೊಂದರೆ ಆಗಿದ್ದರೆ ಇದರ ಕಾಂಡ, ಎಲೆಯನ್ನು ಚೆನ್ನಾಗಿ ಅರೆದು ಬಾವು ಆಗಿರುವ ಜಾಗದಲ್ಲಿ ಪಟ್ಟು ಹಾಕಬೇಕು.
ಇದರಿಂದ ನೋವು ಮತ್ತು ಬಾವಿನಿಂದಾದ ಊತದ ಉಪಶಮನ ಸಾಧ್ಯವಾಗುತ್ತದೆ. ಎಲೆ ಮತ್ತು ಬೇರುಗಳನ್ನು ಚೆನ್ನಾಗಿ ಅರೆದು ಕುಡಿಸುವುದು ಮಂಡಿನೋವು, ಮಂಡಿ ಊತ, ಮಲಬದ್ಧತೆ, ಮೂತ್ರಪಿಂಡ ಹಾಗೂ ಲಿವರ್ನ ತೊಂದರೆಗೆ ಉತ್ತಮ ಔಷಧ
ಸಾಮಾನ್ಯ ಶೀತ ಆದರೆ ಇದು ಒಳ್ಳೆಯ ಮದ್ದು. ಗಾಯವಾಗಿ ರಕ್ತಸ್ರಾವವಾಗುತ್ತಿದ್ದರೆ ಇದರ ಎಲೆಯನ್ನು ಜಜ್ಜಿ ರಸ ಹಚ್ಚಿದರೆ ರಕ್ತ ಸೋರುವುದು ನಿಲ್ಲುತ್ತದೆ. ಗಾಯ ಬೇಗನೆ ವಾಸಿಯಾಗುತ್ತದೆ.
ಮೂಲವ್ಯಾಧಿ, ಕಾಲರಾ ಮತ್ತು ಸಾಮಾನ್ಯ ವಾಂತಿಭೇದಿಗೂ ಉತ್ತಮ ಔಷಧಿ. ಚರ್ಮ ವ್ಯಾಧಿಯನ್ನೂ ಕಡಿಮೆ ಮಾಡುತ್ತದೆ. ಕೆಲವೊಂದು ಸ್ತ್ರೀ ರೋಗಕ್ಕೂ ಉತ್ತಮ ಮದ್ದು. ಎಲೆ, ಹೂವು, ಕಾಂಡ ಹಾಗೂ ಬೇರು ಎಲ್ಲವೂ ಔಷಧೀಯ ಗುಣವನ್ನು ಹೊಂದಿದೆ.