ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ, ಬಿ.ಆಯುಷ್, ಬಿ.ಆರ್ಕ್ ಮತ್ತು ಬ್ಯಾಚುಲರ್ ಆಫ್ ಟೆಕ್ನಾಲಜಿ ವ್ಯಾಸಂಗಕ್ಕಾಗಿ ಸಿಇಟಿ/ನೀಟ್ ಮೂಲಕ ಪ್ರವೇಶ ಪಡೆಯ ಬಯಸುವ ವಿದ್ಯಾರ್ಥಿಗಳಿಗೆ “ಅರಿವು’ ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ನಿಗಮದ ವೆಬ್‍ಸೈಟ್ www.kmdconline.karnataka.gov.in/ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಿಗಧಿಪಡಿಸುವ ಶುಲ್ಕದನ್ವಯ ನಿಗಮವು ವಿದ್ಯಾಭ್ಯಾಸ ಸಾಲವನ್ನು ಮುಂಚಿತವಾಗಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಂಜೂರು ಮಾಡಿ ನಂತರ ಮಂಜೂರಾದ ಹಣವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ಕಾಲೇಜಿಗೆ ನೇರವಾಗಿ ಪಾವತಿಸುತ್ತದೆ.
ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿದ ಅರ್ಜಿಯನ್ನು ಪ್ರಿಂಟ್‍ಔಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ 04, ಸಿಇಟಿ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ಇಂಡೆಮ್ನಿಟಿ ಬಾಂಡ್ ಈ ಎಲ್ಲಾ ದಾಖಲಾತಿಗಳನ್ನು ಜುಲೈ, 20 ರೊಳಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ), ಮೌಲಾನ ಆಜಾದ್ ಭವನ, ಎಫ್‍ಎಂಸಿ. ಕಾಲೇಜು ಹತ್ತಿರ, ಮಡಿಕೇರಿ. ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಕಚೇರಿಯ ದೂ.ಸಂ. 08272-220449 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಬಿ.ಎನ್.ನಾಗೇಂದ್ರ ಅವರು ತಿಳಿಸಿದ್ದಾರೆ.