ಅಶ್ವತ್ಥ ಎಲೆಯನ್ನು ಹಾಲಿನಲ್ಲಿ ಹಾಕಿ ಕುದಿಸಿ ಸಕ್ಕರೆ ಹಾಕಿ ಬೆಳಗ್ಗೆ ಮತ್ತು ರಾತ್ರಿ ಕುಡಿದರೆ ಶೀತ -ಕೆಮ್ಮು ನಿವಾರಣೆಯಾಗುತ್ತದೆ. ಅಶ್ವತ್ಥ ಎಲೆಯ ರಸಕ್ಕೆ ಸಕ್ಕರೆ ಹಾಕಿ ಕುಡಿದರೆ ಕಾಮಾಲೆ ಕಾಯಿಲೆಗೆ ಒಳ್ಳೆಯದು.
ಅಶ್ವತ್ಥ ಮರದ ತೊಗಟೆಯನ್ನು ಪುಡಿ ಮಾಡಿ ಹಲ್ಲು ಉಜ್ಜುವುದರಿಂದ ಹಲ್ಲುಗಳು ಸ್ಟ್ರಾಂಗ್ ಆಗುತ್ತವೆ. ಜತೆಗೆ ಹೊಳಪು ಕೂಡ ಬರುತ್ತದೆ. ಅಷ್ಟೇ ಅಲ್ಲ ಹಲ್ಲು ನೋವು ಸಹ ನಿವಾರಣೆಯಾಗುತ್ತದೆ.
ಸುಮಾರು ಹತ್ತು ಅಶ್ವತ್ಥ ಎಲೆಗಳನ್ನು ಎರಡು ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಬೇಕು. ಅದನ್ನು ಒಂದು ಗ್ಲಾಸ್ ನೀರಿಗೆ ಬತ್ತಿಸಬೇಕು. ಈ ಕಷಾಯವನ್ನು ತಣಿಸಿ ಕುಡಿಯಬೇಕು. ಇದರಿಂದ ಹೃದಯ ಸಂಬಂಧಿ ಸಮಸ್ಯೆ ದೂರವಾಗುತ್ತದೆ.
ಅಶ್ವತ್ಥ ಮರದ ತೊಗಟೆಯನ್ನು ಒಣಗಿಸಬೇಕು. ಚೆನ್ನಾಗಿ ಒಣಗಿದ ನಂತರ ಅದನ್ನು ಪುಡಿ ಮಾಡಬೇಕು. ಈ ಪುಡಿಯನ್ನು ನೀರಿಗೆ ಹಾಕಿ ಕುಡಿಯುವುದರಿಂದ ಅಸ್ತಮಾ ನಿವಾರಣೆಯಾಗುತ್ತದೆ.
ಸೀಬೆಕಾಯಿಯಲ್ಲಿ ಕಾರ್ಬೊ ಹೈಡ್ರೇಡ್ ಮತ್ತು ಫೈಬರ್ ಇರುವುದರಿಂದ ಬೊಜ್ಜನ್ನೂ ನಿಯಂತ್ರಿಸುತ್ತದೆ, ಸೀಬೆ ಹಣ್ಣನ್ನು ನಿಮ್ಮ ಡಯಟ್‌ನಲ್ಲಿರಿಸಿಕೊಂಡರೆ ಕೊಲೆಸ್ಟ್ರಾಲ್ ನಿಯಂತ್ರಣ ಸಾಧ್ಯ, ಇದರಲ್ಲಿ ಕೊಬ್ಬಿನಂಶ ಕೇವಲ 0.9 ಇದ್ದು, 84 ಕ್ಯಾಲೊರಿ ಮಾತ್ರ ಇರುತ್ತದೆ.
ಸೀಬೆಕಾಯಿ ಸೇವನೆ ಚರ್ಮವನ್ನೂ ಹದವಾಗಿಡುತ್ತದೆ ಅನೇಕ ತ್ವಚೆ ಸಂಬಂಧಿ ಸಮಸ್ಯೆಗಳನ್ನು ದೂರವಿಡುತ್ತದೆ ದಿನಕ್ಕೊಂದು ಸೀಬೆಕಾಯಿ ತಿಂದರೆ ಸಾಕು, ಅಗತ್ಯವಾದ ಕಬ್ಬಿಣಾಂಶ, ಫೋಲಿಕ್ ಆಸಿಡ್, ಕ್ಯಾಲ್ಸಿಯಂ, ಫೈಬರ್, ಪ್ರೊಟೀನ್, ಕಾರ್ಬೊಹೈಡ್ರೇಡ್, ವಿಟಮಿನ್ ಎ, ಬಿ ಮತ್ತು ಸಿ ಎಲ್ಲವನ್ನೂ ನೀಡುತ್ತದೆ.