WhatsApp Group Join Now

ಬಿಳಿ ತೊನ್ನುರೋಗಕ್ಕೆ: ಬಲಿತ ಅರಿಶಿನ ಕೊಂಬು ಮತ್ತು ಬಲಿತಎಕ್ಕದ ಬೇರನ್ನು ತಣ್ಣೀರಿನಲ್ಲಿ ತೇದು ತೊನ್ನಿರುವ ಸ್ಥಳದಲ್ಲಿ ಹಚ್ಚುವುದು. ಶರೀರದ ಸ್ವಲ್ಪ ಭಾಗದಲ್ಲಿ ಪ್ರಥಮವಾಗಿ ಲೇಪಿಸುವುದು. ಗುಣಕಂಡ ಮೇಲೆ ಚಿಕಿತ್ಸೆಯನ್ನು ಮುಂದುವರಿಸುವುದು.

ಕಾಲಾರಾ ಬೇನೆಯಲ್ಲಿ: ಎಕ್ಕದ ಬೇರಿನತೊಗಟೆ ಮತ್ತುಮೆಣಸಿನ ಕಾಳು ಸಮತೂಕ ನುಣ್ಣಗೆ ಚೂರ್ಣ ಮಾಡಿ, ಹಸಿರು ಶುಂಠಿರಸದಲ್ಲಿ ಮರ್ದಿಸಿ ಕಡಲೆಗಾತ್ರ ಗುಳಿಗೆಯನ್ನು ಮಾಡಿ ನೆರಳಲ್ಲಿ ಒಣಗಿಸುವುದು. ಪ್ರತಿಎರಡು ತಾಸಿಗೊಮ್ಮೆ ಒಂದೊಂದು ಗುಳಿಗೆಯನ್ನು ನೀರಿನೊಂದಿಗೆ ಸೇವಿಸುವುದು.

ಚೇಳಿನ ವಿಷಕ್ಕೆ: ಹಿಂಗನ್ನುಎಕ್ಕದ ಹಾಲಿನಲ್ಲಿತೇದು ಚೇಳು ಕುಟುಕಿರುವಜಾಗದಲ್ಲಿ ಹಚ್ಚುವುದು.

ಉದರ ಬೇನೆ, ಅಜೀರ್ಣದಲ್ಲಿ: ಇನ್ನೊ ಬಿರಿಯದಿರುವ 20 ಮೊಗ್ಗುಗಳನ್ನು ತಂದು ಶುಂಠಿ ,ಓಮದ ಕಾಳು ಮತ್ತು ಕರಿಯ ಲವಣವನ್ನು ಸಮಪ್ರಮಾಣದಲ್ಲಿ ಸೇರಿಸಿ, ಶುದ್ಧ ನೀರಿನಲ್ಲಿಅರೆದು ಕಡಲೆಗಾತ್ರ ಗುಳಿಗೆಗಳನ್ನು ಮಾಡಿ ನೆರಳಿನಲ್ಲಿ ಒಣಗಿಸುವುದು. ದಿವಸಕ್ಕೆ ಎರಡು ಸಾರಿಒಂದೊಂದು ಮಾತ್ರೆಯನ್ನು ಸೇವಿಸಿ ನೀರುಕುಡಿಯುವುದು.

ವಾಯು ನೋವುಗಳಿಗೆ: ಎಕ್ಕದ ಎಲೆಯರಸ 20 ಗ್ರಾಂ, ಬೊಂತೆ ಕಳ್ಳಿ ರಸ 20ಗ್ರಾಂ, ಲಕ್ಕಿ ಎಲೆ ರಸ, 20 ಗ್ರಾಂ, ಉಮ್ಮತ್ತಿ ಎಲೆ ರಸ 20 ಗ್ರಾಂ, ಹಸುವಿನ ಹಾಲು 60ಮಿ, ಲಿ. ಎಳ್ಳಣ್ಣೆ 120 ಗ್ರಾಂ ಸೇರಿಸಿ ಕಾಯಿಸುವಾಗ, ರಾಸ್ಮಿ, ವಿಳಂಗ, ದೇವದಾರು, ಗಜ್ಜುಗದ ತಿರುಳು ಪುಡಿ ಎರಡೆರಡುಟೀ ಚಮಚ ಹಾಕಿ ಇಳಿಸುವಾಗ 20 ಗ್ರಾಂ ಆರತಿಕರ್ಪೂರ ಹಾಕುವುದು. ತಣ್ಣಗಾದ ಮೇಲೆ ಕೀಲು, ಕಾಲು ನೋವುಗಳಿಗೆ ಹಚ್ಚುವುದು.

WhatsApp Group Join Now

Leave a Reply

Your email address will not be published. Required fields are marked *