ಈ ಹಣ್ಣನ್ನು ನಿತ್ಯವೂ ನಿಯಮಿತವಾಗಿ ಸೇವಿಸಿದರೆ ಇದರಲ್ಲಿರುವ ಫೈಟೋನ್ಯೂಟ್ರಿಯೆಂಟ್ಗಳು ಕ್ಯಾನ್ಸರ್ನಲ್ಲಿ ಪ್ರತಿಬಂಧಕವಾಗಿ ಕಾರ್ಯವೆಸಗುತ್ತದೆ, ಅಧಿಕ ವಿಟಮಿನ್ ಎ ಇರುವುದರಿಂದ ಕಣ್ಣಿನ ತೊಂದರೆಗಳಿಗೆ ಮುಖ್ಯವಾಗಿ ಇರುಳುಗಣ್ಣು ತೊಂದರೆಗಳಿಗೆ ಉತ್ತಮ ಮತ್ತು ಇದರಲ್ಲಿರುವ ತಾಮ್ರದ ಅಂಶ ಥೈರಾಯಿಡ್ ತೊಂದರೆಗಳಿಗೆ ಹಿತಕರ.

ಹಲಸಿನ ಹಣ್ಣಿನ ಸೊನೆ ಒಣಗಿಸಿದಾಗ ಅದರಲ್ಲಿ ಆರ್ಟೋಸ್ಟಿರಾನ್ ಎಂಬ ರಾಸಾಯನಿಕ ಅಂಶವು ಸಿಗುತ್ತದೆ, ಇದು ಪುರುಷರ ಹಾರ್ಮೋನ್-ಆಂಡ್ರೋಜೆನ್ ನಂತೆ ಕಾರ್ಯ ವೆಸಗುತ್ತದೆ, ಜ್ವರ ಮತ್ತು ಭೇದಿ ಉಂಟಾದಾಗ ಹಲಸಿನ ಬೇರಿನ ಕಷಾಯವನ್ನು ಸೇವಿಸಿದರೆ ಗುಣಕಾರಿ.

ಮೂಳೆ ಸವೆತವನ್ನು ತಡೆಗಟ್ಟುತ್ತದೆ : ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.

ಥೈರಾಯ್ಡ್ ಗ್ರಂಥಿಯನ್ನು ಆರೋಗ್ಯಕರವಾಗಿ ಇಡುತ್ತದೆ : ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ, ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.

ಜೀರ್ಣಶಕ್ತಿ : ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.

ಹೃದಯದ ಸ್ವಾಸ್ಥ್ಯ ಹೆಚ್ಚಿಸುತ್ತದೆ : ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.

ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ : ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ, ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.

Leave a Reply

Your email address will not be published. Required fields are marked *