ಹೊಟ್ಟೆಯ ಕೊಬ್ಬು ಆರೋಗ್ಯಕ್ಕೆ ತುಂಬಾ ಹಾನಿಕರ. ಇದರಿಂದಾಗಿ ಮಧುಮೇಹದಿಂದ ಹಿಡಿದುಹೃದಯದ ಸಮಸ್ಯೆ, ನಿದ್ರಾಹೀನತೆ ಮತ್ತು ಕ್ಯಾನ್ಸರ್ ನಂತಹ ಹಲವಾರು ಆರೋಗ್ಯ ಸಮಸ್ಯೆಗಳುಕಾಣಿಸಿಕೊಳ್ಳಬಹುದು. ಹೊಟ್ಟೆಯ ಬೊಜ್ಜು ವ್ಯಕ್ತಿಯೊಬ್ಬನ ಆತ್ಮವಿಶ್ವಾಸ ಕುಗ್ಗಿಸುವುದು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಹೊಟ್ಟೆ ತುಂಬಾ ಬೊಜ್ಜು ತುಂಬಿಕೊಂಡಿದ್ದರೆ ಅದನ್ನು ಕರಗಿಸುವುದು ಹೇಗೆ ಎನ್ನುವ ಚಿಂತೆ ಕಾಡುವುದು ಸಹಜ. ಇಂದಿನ ಜೀವನ ಶೈಲಿ ಮತ್ತು ಆಹಾರ ಕ್ರಮದಿಂದಾಗಿ ಹೆಚ್ಚಿನವರಲ್ಲಿ ಬೊಜ್ಜು ಕಾಣಿಸಿ ಕೊಳ್ಳುವುದು. ಹೊಟ್ಟೆಯಲ್ಲಿ ತುಂಬಿರುವ ಬೊಜ್ಜು ಕಡಿಮೆ ಮಾಡುವುದು ಕಠಿಣ ಕೆಲಸ. ಹೊಟ್ಟೆಯ ಕೊಬ್ಬು ಆರೋಗ್ಯಕ್ಕೆ ತುಂಬಾ ಹಾನಿಕರ. ಇದರಿಂದಾಗಿ ಮಧುಮೇಹದಿಂದ ಹಿಡಿದು ಹೃದಯದ ಸಮಸ್ಯೆ, ನಿದ್ರಾಹೀನತೆ ಮತ್ತು ಕ್ಯಾನ್ಸರ್ ನಂತಹ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿ ಕೊಳ್ಳಬಹುದು. ಹೊಟ್ಟೆಯ ಬೊಜ್ಜು ವ್ಯಕ್ತಿಯೊಬ್ಬನ ಆತ್ಮವಿಶ್ವಾಸ ಕುಗ್ಗಿಸುವುದು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ.

ಮಧ್ಯಭಾಗದಲ್ಲಿರುವ ಒಳಾಂಗಗಳ ಕೊಬ್ಬು ಹೊಟ್ಟೆಯ ಕೊಬ್ಬಿಗೆ ಪ್ರಮುಖ ಕಾರಣವಾಗಿದೆ ಮತ್ತು ಇದು ತುಂಬಾ ಅಪಾಯಕಾರಿ ಕೂಡ. ಒಳಾಂಗಗಳ ಕೊಬ್ಬು ಹೊಟ್ಟೆಯಲ್ಲಿ ತುಂಬಾ ಆಳವಾಗಿ ಇರುವ ಕೊಬ್ಬು ಮತ್ತು ಚರ್ಮದ ಅಡಿಭಾಗದಲ್ಲಿ, ಕಿಡ್ನಿ ಮತ್ತು ಯಕೃತ್ ನಂತಹ ಕೆಲವೊಂದು ಮಹತ್ವದ ಅಂಗಾಂಗಗಳ ಸುತ್ತಲು ಆವರಿಸಿಕೊಂಡಿರುವುದು. ಹೊಟ್ಟೆ ಕೊಬ್ಬನ್ನ ಇಳಿಸು ವುದರಿಂದ ನಿಮ್ಮ ಆರೋಗ್ಯಕ್ಕೆ ಮಾತ್ರವಲ್ಲದೆ, ಸೌಂದರ್ಯಕ್ಕೂ ತುಂಬಾ ಒಳ್ಳೆಯದು. ಹೊಟ್ಟೆಯು ಸಮತಟ್ಟಾಗಿದ್ದರೆ ಆಗ ಇದು ಚರ್ಮದ ಸೌಂದರ್ಯ ವೃದ್ಧಿಸುವುದು. ಅದೇ ರೀತಿಯಾಗಿ ನಿಮಗೆ ಯಾವುದೇ ರೀತಿಯ ಬಟ್ಟೆ ಧರಿಸಬಹುದು ಮತ್ತು ಆತ್ಮವಿಶ್ವಾಸವನ್ನು ಕೂಡ ಇದು ಹೆಚ್ಚಿಸುವುದು. ಹೊಟ್ಟೆಯ ಕೊಬ್ಬು ಇಳಿಸುವ ಏಳು ವಿಧಾನಗಳ ಬಗ್ಗೆ ನೀವು ತಿಳಿಯಿರಿ. ಹೊಟ್ಟೆಯ ಕೊಬ್ಬು ಇಳಿಸಿಕೊಳ್ಳುವ ಮೊದಲು ಬಯುಸವವರು ಮುಖ್ಯವಾಗಿ ಪಾಲಿಸಬೇಕಾಗಿರುವಂತಹ ವಿಚಾರವೆಂದರೆ ಅದು ಸರಿಯಾದ ಆಹಾರ ಕ್ರಮ ಮತ್ತು ವ್ಯಾಯಮ. ಹೊಟ್ಟೆ ಕೊಬ್ಬು ಕರಗಿಸಲು ವ್ಯಾಯಾಮವು ಅತೀ ಮಹತ್ವದ್ದಾಗಿದೆ. ವ್ಯಾಯಾಮದ ಬಗ್ಗೆ ಕೆಳಗೆ ತಿಳಿಸಿಕೊಡಲಿದ್ದೇವೆ. ಇದಕ್ಕೆ ಮೊದಲು ನೀವು ಕೊಬ್ಬು ಕರಗಿಸುವ ಹತ್ತು ಆಹಾರಗಳ ಬಗ್ಗೆ ತಿಳಿಯಿರಿ.

ತುಂಬಾ ಖಾರವಾಗಿರುವಂಹತ ಮೆಣಸುಗಳು ಹೊಟ್ಟೆಯ ಕೊಬ್ಬು ಕರಗಿಸುವಲ್ಲಿ ತುಂಬಾ ಮಹತ್ವದ ಪಾತ್ರ ವಹಿಸುವುದು ಮತ್ತು ಹಸಿವನ್ನು ಇದು ಕಡಿಮೆ ಮಾಡುವುದು. ಇದು ಆರೋಗ್ಯಕಾರಿ ಚಯಾಪಚಯ ಕ್ರಿಯೆ ವೃದ್ಧಿಸುವ ವಿಟಮಿನ್ ಸಿಯನ್ನು ಒದಗಿಸುವುದು. ಪ್ರೋಟೀನ್ ಹೊಂದಿರುವಂತಹ ಮೊಟ್ಟೆಯು ನಿಮ್ಮ ಹಸಿವನ್ನು ನಿಯಂತ್ರಣದಲ್ಲಿ ಇಡುತ್ತದೆ. ಇದರಿಂದಾಗಿ ನೀವು ಕಡಿಮೆ ತಿನ್ನುವಿರಿ ಮತ್ತು ಹೊಟ್ಟೆಯ ಕೊಬ್ಬು ವೇಗವಾಗಿ ಕರಗುವುದು. ಆರೋಗ್ಯಕಾರಿ ಪ್ರೋಟೀನ್ ಸೇವನೆಯಿಂದ ಕೊಬ್ಬು ಕರಗಿಸಿಕೊಳ್ಳಬಹುದು ಎಂದು ಕೆಲವೊಂದು ಅಧ್ಯಯನಗಳು ಹೇಳಿವೆ. ಹೊಟ್ಟೆಯ ಕೊಬ್ಬು ಕರಗಿಸುವ ವಿಚಾರಕ್ಕೆ ಬಂದರೆ ಆಗ ಮುಖ್ಯವಾಗಿ ಬೀನ್ಸ್ ಪ್ರಕೃತಿಯು ಮನುಷ್ಯನಿಗೆ ನೀಡಿರುವಂತಹ ಒಂದು ಉಡುಗೊರೆ ಎಂದು ಹೇಳಬಹುದು. ಇದು ಕಾರ್ಬ್ಸ್ ಮತ್ತು ಪ್ರೋಟೀನ್ ನ ಸಮತೋಲನ ಕಾಪಾಡುವುದು ಮತ್ತು ದೀರ್ಘಕಾಲ ತನಕ ಹೊಟ್ಟೆಯು ತುತುಂಬಿರುವಂತೆ ಮಾಡುವುದು. ಕಪ್ಪು ಬೀನ್ಸ್, ಕಿಡ್ನಿ ಬೀನ್ಸ್, ಮಸೂರ, ಗಾರ್ಬಾಂಜೊ ಮತ್ತು ಕ್ಯಾನೆಲ್ಲಿನಿ ಇದಕ್ಕೆ ಒಳ್ಳೆಯ ಆಯ್ಕೆಯಾಗಿದೆ.

Leave a Reply

Your email address will not be published. Required fields are marked *