ಹತ್ತನೇ ತರಗತಿ ಹಾಗೂ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ 2a 2b ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.
ವೇತನ ಶೀಘ್ರಲಿಪಿಗಾರರು ಹುದ್ದೆಗೆ ಮಾಸಿಕ ರೂಪಾಯಿ 27,000 ಆರ್ನೂರ 50 ರಿಂದ 52,000 ಆರ್ನೂರ 50 ಬೆರಳಚ್ಚುಗಾರರು ಹಾಗೂ ಬೆರಳಚ್ಚು ನಕಲುಗಾರರು ಹುದ್ದೆಗೆ ಮಾಸಿಕ ರೂಪಾಯಿ 21,400 ರಿಂದ 42,000.ಜವಾನ ಹುದ್ದೆಗೆ ಮಾಸಿಕ ರೂಪಾಯಿ ಹದಿನೈದು ಸಾವಿರದಿಂದ ಇಪ್ಪತೆಂಟು ಸಾವಿರ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ. ಆಯ್ಕೆ ವಿಧಾನ, ಶೀಘ್ರಲಿಪಿಗಾರ ಬೆರಳಚ್ಚುಗಾರ ಬೆರಳಚ್ಚು ನಕಲುಗಾರ ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಕೌಶಲ ಪರೀಕ್ಷೆಗಳ ಒಟ್ಟು ಅಂಕಗಳ ಶೇಕಡವಾರು ಮತದ ಆಧಾರದ ಮೇಲೆ ಮೀಸಲಾತಿಗನುಗುಣವಾಗಿ ಒಂದು ಹುದ್ದೆಗೆ ಐದು ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಸೇವಕ ಹುದ್ದೆಗೆ 10 ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.ಅರ್ಜಿ ಶುಲ್ಕ, ಸಾಮಾನ್ಯ ವರ್ಗ ಪ್ರವರ್ಗ, ಎರಡು ಎ, ಎರಡು ಬಿ, ಮೂರು ಎ, ಮೂರು ಬಿ ವರ್ಗದ ಅಭ್ಯರ್ಥಿಗಳು ₹200 ಎಸ್ಟಿ ಪ್ರವರ್ಗ ಒಂದು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಹಾಗೂ ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಹುದ್ದೆ ಹೆಸರು ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹಾಗೂ ಸೇವಕ ಹುದ್ದೆಗಳ ಸಂಖ್ಯೆ ಒಟ್ಟು 60 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅದರಲ್ಲಿ ಶೀಘ್ರಲಿಪಿಗಾರರು 10 ಹುದ್ದೆ ಬೆರಳಚ್ಚು ನಕಲುಗಾರರು ಐದು ಹುದ್ದೆ ಸೇವಕ 40 ಹುದ್ದೆ ಖಾಲಿ ಇದೆ.
ಉದ್ಯೋಗ ಸ್ಥಳ, ತುಮಕೂರು ಜಿಲ್ಲೆ.ವಿದ್ಯಾರ್ಹತೆ, ಶೀಘ್ರಲಿಪಿಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಹಾಗೂ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೊಮ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.