WhatsApp Group Join Now

ದ್ವಿತೀಯ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ. 2A 2B ಅಭ್ಯರ್ಥಿಗಳಿಗೆ 38 ವರ್ಷ ನಿಗದಿಪಡಿಸಲಾಗಿದೆ.

ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 21,400 ರಿಂದ ರೂಪಾಯಿ 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.ಆಯ್ಕೆ ವಿಧಾನ ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಕೌಶಲ ಪರೀಕ್ಷೆಗಳಲ್ಲಿ ಪಡೆದ ಒಟ್ಟು ಅಂಕಗಳ ಶೇಕಡಾವಾರು ಮೊತ್ತದ ಆಧಾರದ ಮೇಲೆ ಮೀಸಲಾತಿಗನು ಗುಣವಾಗಿ ಒಂದು ಹುದ್ದೆಗೆ ಐದು ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಅರ್ಜಿ ಶುಲ್ಕ, ಸಾಮಾನ್ಯ ವರ್ಗ, ಪ್ರವರ್ಗ ಎರಡು ಎ ಎರಡು ಬಿ ಮೂರು ಎ, ಮೂರು ಬಿ ವರ್ಗದ ಅಭ್ಯರ್ಥಿಗಳು ರೂ 750, ಎಸ್‌ಸಿ ಎಸ್‌ಟಿ ಪ್ರವರ್ಗ ಒಂದು ಹಾಗೂ ಅಂಗವಿಕಲ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಹಾಗೂ ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಲಿಂಕ್ https://ballari.dcourts.gov.in/notice-category/recruitments/ಹುದ್ದೆಗಳ ಸಂಖ್ಯೆ ಒಟ್ಟು 21 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅದರಲ್ಲಿ ಬೆರಳಚ್ಚುಗಾರರು 13 ಹುದ್ದೆ ಬೆರಳಚ್ಚು ನಕಲುಗಾರರು, ಎಂಟು ಹುದ್ದೆ ಖಾಲಿ ಇದೆ.ವಿದ್ಯಾರ್ಹತೆ, ಬೆರಳಚ್ಚುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.ಉದ್ಯೋಗ ಸ್ಥಳ, ಬಳ್ಳಾರಿ ಜಿಲ್ಲೆ. ಮೇಲೆ ಕೊಟ್ಟಿರುವಂತಹ ಲಿಂಕನ್ನು ಓಪನ್ ಮಾಡಿಕೊಂಡು ನಿಮ್ಮ ಮಾನದಂಡನೆಯ ಪ್ರಕಾರ ಅರ್ಜಿಯನ್ನು ಸಲ್ಲಿಸಿ.

WhatsApp Group Join Now

Leave a Reply

Your email address will not be published. Required fields are marked *