IBPS ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ ಅಗತ್ಯವಿರುವ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ವಿವರವಾಗಿ ನೀಡಲಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ.

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ನೇಮಕಾತಿ ವಯೋಮಿತಿ ಆಫೀಸ್ ಅಸಿಸ್ಟೆಂಟ್ ಮಲ್ಟಿಪರ್ಪಸ್ ಹುದ್ದೆಗೆ 18 ರಿಂದ ಇಪ್ಪತೆಂಟು ವರ್ಷ, ಆಫೀಸರ್ ಸ್ಕೇಲ್ ಒಂದು ಹುದ್ದೆಗೆ 18 ರಿಂದ 30 ವರ್ಷ, ಆಫೀಸರ್ ಸ್ಕೇಲ್ ಒಂದು ಹುದ್ದೆಗೆ 21 ರಿಂದ 32 ವರ್ಷ, ಆಫೀಸರ್ ಸ್ಕೇಲ್ ತ್ರಿ ಹುದ್ದೆಗೆ 21 ರಿಂದ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.ವಯೋಮಿತಿ ಸಡಿಲಿಕೆ, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ. ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಆಯ್ಕೆ ವಿಧಾನ, ಪ್ರಿಲಿಮಿನರಿ ಪರೀಕ್ಷೆ ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು IBPS ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಕೆಯ ಲಿಂಕ್ ಅನ್ನು https://karnatakajobinfo.com/ibps-rrb-recruitment-2024-apply-online-for-9995-office-assistant-and-officers-posts ಅರ್ಜಿ ಶುಲ್ಕ ಎಸ್‌ಸಿ ಎಸ್‌ಟಿ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳು ₹175. ಉಳಿದ ಅಭ್ಯರ್ಥಿಗಳು ₹850 ಅರ್ಜಿ ಶುಲ್ಕ ಪಾವತಿಸಬೇಕು.ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಹುದ್ದೆ ಹೆಸರು ಆಫೀಸ್ ಅಸಿಸ್ಟೆಂಟ್ ಮಲ್ಟಿಪರ್ಪಸ್ ಆಫೀಸರ್ ಸ್ಕೇಲ್ ಒಂದು ಆಫೀಸರ್ ಹಾಗು ಆಫೀಸರ್ ಸ್ಕೇಲ್ 3.

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು. ಹುದ್ದೆಗಳ ಸಂಖ್ಯೆ ಒಟ್ಟು 9995 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅದರಲ್ಲಿ ಕರ್ನಾಟಕದಲ್ಲಿ ಒಟ್ಟು 586 ಹುದ್ದೆಗಳು ಖಾಲಿಯಿದೆ.ಉದ್ಯೋಗ ಸ್ಥಳ, ಭಾರತದೆಲ್ಲೆಡೆ.

Leave a Reply

Your email address will not be published. Required fields are marked *