ಹತ್ತನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಂದ ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಭಾರತೀಯ ಅಂಚೆ ಇಲಾಖೆ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು. ಅದರಲ್ಲಿ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ವೇತನ, ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗೆ ಮಾಸಿಕ ರೂಪಾಯಿ 12,000 ದಿಂದ 29,380.nಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗೆ ಮಾಸಿಕ ರೂಪಾಯಿ 10000 ದಿಂದ 24,000 ರ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ. ಆಯ್ಕೆ ವಿಧಾನ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಕೆ ಲಿಂಕ್ https://indiapostgdsonline.gov.in/ ಅರ್ಜಿ ಶುಲ್ಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪಿಡಬ್ಲ್ಯೂಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಉಳಿದವರು ₹100 ಅರ್ಜಿ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಹಾಗೂ ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.ಹುದ್ದೆ ಹೆಸರು ಗ್ರಾಮೀಣ ಡಾಕ್ ಸೇವ ಬ್ರಾಂಚ್, ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳ ಸಂಖ್ಯೆ ಒಟ್ಟು 44,228 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.
ಅದರಲ್ಲಿ ಕರ್ನಾಟಕ ಅಂಚೆ ವೃತ್ತದಲ್ಲಿ ಒಟ್ಟು 1940 ಹುದ್ದೆಗಳು ಖಾಲಿ ಇದೆ ಉದ್ಯೋಗ ಸ್ಥಳ ಕರ್ನಾಟಕದೆಲ್ಲೆಡೆ ಅಭ್ಯರ್ಥಿಗಳು 10ನೇ ತರಗತಿ ಅಥವಾ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನದ ಜೊತೆಗೆ ಸೈಕ್ಲಿಂಗ್ ಜ್ಞಾನ ಹೊಂದಿರಬೇಕು.10ನೇ ತರಗತಿ/ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.