ದ್ವಿತೀಯ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಭಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ. ಥ್ರೀ ಬಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ನ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು, ಅರ್ಜಿ ಸಲ್ಲಿಕೆ ಲಿಂಕ್ ಅನ್ನು ಈ ಮಾಹಿತಿಯ ಕೊನೆಯದಾಗಿ ನೀಡಲಾಗಿದೆ. ಅರ್ಜಿ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹500, ಪ್ರವರ್ಗ, ಎರಡು ಎ, ಎರಡು ಬಿ ಮೂರು ಎ, ಮೂರು ಬಿ ವರ್ಗದ ಅಭ್ಯರ್ಥಿಗಳು ₹300. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು ₹200 ವಿಕಲ ಚೇತನ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಸುವ ವಿಧಾನ, ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಜಿಲ್ಲಾ ಪಂಚಾಯತ್ ಬಾಗಲಕೋಟೆ ಇವರ ಬ್ಯಾಂಕ್ ಖಾತೆಗೆ ಶುಲ್ಕವನ್ನು ಪಾವತಿಸಬೇಕು.
ಹುದ್ದೆಯ ಹೆಸರು, ಗ್ರಾಮ ಪಂಚಾಯಿತಿ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು. ಹುದ್ದೆಗಳ ಸಂಖ್ಯೆ ಒಟ್ಟು ನಾಲ್ಕರಿಂದ ಎಂಟು ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಉದ್ಯೋಗ ಸ್ಥಳ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು. ವಿದ್ಯಾರ್ಹತೆ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಟ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ, 18 ಆಗಸ್ಟ್ 2024 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು 28 ಆಗಸ್ಟ್ 2024 ಈ ತಾರೀಖಿನ ಒಳಗಡೆ ನೀವು ಅರ್ಜಿಯನ್ನು ಸಲ್ಲಿಸಬೇಕು. ಹಾಗೂ ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೀಡಿರುವ ಲಿಂಕ್ ಅನ್ನು ಓಪನ್ ಮಾಡಿಕೊಂಡು ನೋಡಿಕೊಳ್ಳಿ https://bagalkot.nic.in/en/zilla-panchayat-recruitment/