ಹತ್ತನೇ ತರಗತಿ ಹಾಗೂ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಅಂಗನವಾಡಿ ಟೀಚರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ವಯೋಮಿತಿ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ವಿಕಲಚೇತನರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಆಯ್ಕೆ ವಿಧಾನ, ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗೆ ಅನುಸಾರವಾಗಿ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಲಿಂಕ್ ಅನ್ನು ಮಾಹಿತಿಯ ಕೊನೆಯದಾಗಿ ನೀಡಲಾಗಿದೆ.
ಹುದ್ದೆ ಹೆಸರು ಅಂಗನವಾಡಿಯ ಕಾರ್ಯಕರ್ತೆಯರು ಮಿನಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿಯ ಸಹಾಯಕಿಯರು ಹುದ್ದೆಗಳ ಸಂಖ್ಯೆ ಒಟ್ಟು 215 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅದರಲ್ಲಿ ಅಂಗನವಾಡಿ ಕಾರ್ಯಕರ್ತೆಯರು 63 ಹುದ್ದೆ ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮೂರು ಹುದ್ದೆ ಅಂಗನವಾಡಿ ಸಹಾಯಕಿಯರು 149 ಹುದ್ದೆ ಖಾಲಿ ಇದೆ. ಉದ್ಯೋಗ ಸ್ಥಳ, ಚಿತ್ರದುರ್ಗ ಜಿಲ್ಲೆ ಚಿತ್ರದುರ್ಗ ಜಿಲ್ಲೆಯಲ್ಲಿ ಭರಮಸಾಗರ, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಹುದ್ದೆಗಳು ಖಾಲಿ ಇದೆ. ವಿದ್ಯಾರ್ಹತೆ, ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು.
ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಂಗನವಾಡಿ ಸಹಾಯಕಿಯರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ 30 ಜುಲೈ 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 31 2024. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.ಅಭ್ಯರ್ಥಿಗಳು ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು. ಉದ್ಯೋಗದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಲಿಂಕ್ ಅನ್ನು ಓಪನ್ ಮಾಡಿಕೊಂಡು ನೋಡಿಕೊಳ್ಳಿ https://karnemakaone.kar.nic.in/abcd/ApplicationForm_JA_org.aspx