ಹತ್ತನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಂದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ.ಅಂಚೆ ಇಲಾಖೆ ನೇಮಕಾತಿ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 19,000 ರೂಪಾಯಿಂದ 63,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ. ವಯೋಮಿತಿ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಅದರಲ್ಲಿ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.ಆಯ್ಕೆ ವಿಧಾನ, ಚಾಲನಾ ಪರೀಕ್ಷೆ ಹಾಗೂ ಮೋಟಾರ್ ಮೆಕ್ಯಾನಿಕ್ ಜ್ಞಾನಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬೇಕು. ಅರ್ಜಿ ನಮೂನೆಯ ಲಿಂಕ್ https://drive.google.com/file/d/10QizpdPDjd2syHUY5zz6_FiD8eE2OJm3/view?usp=drivesdk ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.ಹುದ್ದೆ ಹೆಸರು ಸ್ಟಾಫ್ ಕಾರ್ ಡ್ರೈವರ್.ಹುದ್ದೆಗಳ ಸಂಖ್ಯೆ ಒಟ್ಟು 27 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.ಉದ್ಯೋಗ, ಸ್ಥಳ, ಚಿಕ್ಕೋಡಿ, ಕಲಬುರಗಿ, ಹಾವೇರಿ, ಕಾರವಾರ, ಬೆಂಗಳೂರು, ಮಂಡ್ಯ, ಮೈಸೂರು, ಪುತ್ತೂರು, ಶಿವಮೊಗ್ಗ, ಉಡುಪಿ ಹಾಗು ಕೋಲಾರ ಡಿವೈಸ್‌ಗಳಲ್ಲಿ ಹುದ್ದೆಗಳು ಖಾಲಿ ಇದೆ. ವಿದ್ಯಾರ್ಹತೆ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಲಘು ಹಾಗೂ ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಲಘು ಹಾಗೂ ಭಾರಿ ವಾಹನ ಚಾಲನೆಯಲ್ಲಿ ಮೂರು ವರ್ಷಗಳ ಅನುಭವ ಹೊಂದಿರಬೇಕು. ಮೋಟಾರ್ ಮೆಕ್ಯಾನಿಸಮ್ ಜ್ಞಾನ ಹೊಂದಿರಬೇಕು. ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.ಚಾಲನಾ ಪರೀಕ್ಷೆ ಹಾಗೂ ಮೋಟಾರ್ ಮೆಕ್ಯಾನಿಸಮ್ ಜ್ಞಾನಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ ಮ್ಯಾನೇಜರ್, ಮೇಲ್ ಮೋಟಾರ್ ಸರ್ವಿಸ್ ಬೆಂಗಳೂರು 560001 ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ ಏಪ್ರಿಲ್ 08 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 14, 2024 ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.