ಒಂದು ವೇಳೆ ನೀವು ಬ್ಯಾಂಕಿಂಗ್ ಪರೀಕ್ಷೆಗೆ ತಯಾರು ಮಾಡುತ್ತಿದ್ದಾರೆ ಇಲ್ಲಿದೆ ನೋಡಿ ನಿಮಗೆ ಸುವರ್ಣ ಅವಕಾಶ. ಈಗಾಗಲೇ ನಿಮಗೆ ಗೊತ್ತಿರಬಹುದು ಪರೀಕ್ಷೆ ದಿನಾಂಕ ಮುಂಚಿತವಾಗಿ ಬಿಟ್ಟಿದ್ದಾರೆ ಒಂದು ಒಳ್ಳೆ ಅರ್ಜಿ ಹಾಕಲು ಲಿಂಕ ಬೇಕಾದರೆ ಸಂಪೂರ್ಣವಾದ ಮಾಹಿತಿ ಓದಿ. ಐಬಿಪಿಎಸ್ ನಿಂದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ಓದಿ.

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ನೇಮಕಾತಿ ವಯೋಮಿತಿ ದಿನಾಂಕ, 1 ಆಗಸ್ಟ್ 2024 ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಗರಿಷ್ಠ 30 ವರ್ಷ ನಿಗದಿಪಡಿಸಲಾಗಿದೆ. ಅದರಲ್ಲಿ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಆಯ್ಕೆ ವಿಧಾನ, ಪ್ರಿಲಿಮಿನರಿ ಪರೀಕ್ಷೆ ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳು ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ ಎಸ್‌ಸಿ ಎಸ್‌ಟಿ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳು ₹175. ಉಳಿದ ಅಭ್ಯರ್ಥಿಗಳು ₹850 ಅರ್ಜಿ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಹುದ್ದೆ ಹೆಸರು ಪ್ರೊಬೆಷನರಿ ಆಫೀಸರ್ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ಸಂಖ್ಯೆ ಒಟ್ಟು 4455 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಉದ್ಯೋಗ ಸ್ಥಳ, ಭಾರತದೆಲ್ಲೆಡೆ .ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸಂಸ್ಥೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು. ಶುಲ್ಕ ಪಾವತಿಸಲು ಕೊನೆಯ ದಿನಾಂಕ ಆಗಸ್ಟ್ 21 2024 ಪ್ರಿಲಿಮಿನರಿ ಪರೀಕ್ಷೆ ದಿನಾಂಕ ಅಕ್ಟೋಬರ್ 2024 ಮುಖ್ಯ ಪರೀಕ್ಷೆ ದಿನಾಂಕ ನವೆಂಬರ್ 2024 ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು. ಅರ್ಜಿ ಹಾಕಲು ಇಲ್ಲಿದೆ ನೋಡಿ ಲಿಂಕ್

Leave a Reply

Your email address will not be published. Required fields are marked *