ದ್ವಿತೀಯ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ.

3 ಬಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ. ಆಯ್ಕೆ ವಿಧಾನ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕ ಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ನ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು, ಅರ್ಜಿ ಸಲ್ಲಿಕೆ ಲಿಂಕ್ ಅನ್ನು ನೀಡಲಾಗಿದೆ. ಅರ್ಜಿ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹500. ಪ್ರವರ್ಗ, ಎರಡು ಎ ಎರಡು ಬಿ ಮೂರು ಎ, ಮೂರು ಬಿ ವರ್ಗದ ಅಭ್ಯರ್ಥಿಗಳು ₹300. ಹೆಸರು ಗ್ರಾಮ ಪಂಚಾಯಿತಿ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು.

ಹುದ್ದೆಗಳ ಸಂಖ್ಯೆ ಒಟ್ಟು 21 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಉದ್ಯೋಗ ಸ್ಥಳ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು. ವಿದ್ಯಾರ್ಹತೆ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಟ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ, 2 ಸೆಪ್ಟೆಂಬರ್ 2024 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ಸೆಪ್ಟಂಬರ್ 2024 ಆಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರತಕ್ಕದ್ದು. ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿನ ಬೇರೆ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.ಹಾಗಾಗಿ ನೀವು ಅರ್ಜಿಯನ್ನು ಹಾಕುವ ಸಂದರ್ಭದಲ್ಲಿ ಈ ಎಲ್ಲಾ ಮೇಲೆ ನಡೆದಂತಹ ಮಾನದಂಡಗಳನ್ನು ಪೂರೈಕೆ ಮಾಡಿದರೆ ನಾವು ಈ ಕೆಳಗಡೆ ನೀಡಿರುವಂತಹ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ನೋಡಿ ನಂತರ ಅರ್ಜಿಯನ್ನು ಸಲ್ಲಿಸಿ.

https://sevasindhuservices.karnataka.gov.in/renderApplicationForm.do;jsessionid=CB548BC1CE705E5937C894DBDDD3E17A?serviceId=20250010&UUID=ba02fb2d-e55f-4249-9d29 53b73c64dc3b&directService=true&tempId=8500&serviceNameToDisplay=Recruitment+for+Library+Supervisors+in+Zilla+Panchayat&grievDefined=0&serviceLinkRequired=No&userLoggedIn=N&source=CTZN&OWASP_CSRFTOKEN=TY3F-IVHF-XT2G-YLXV-EI7Z-MW3D-DPPF-F8CN

Leave a Reply

Your email address will not be published. Required fields are marked *