ಹತ್ತನೇ ತರಗತಿ ಹಾಗೂ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಅಂಗನವಾಡಿ ಟೀಚರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ವಯೋಮಿತಿ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಗರಿಷ್ಠ ಮೂವತೈದು ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಅದರಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಆಯ್ಕೆ ವಿಧಾನ, ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗೆ ಅನುಸಾರವಾಗಿ ಕ್ರೋಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಹುದ್ದೆ ಹೆಸರು ಅಂಗನವಾಡಿಯ ಕಾರ್ಯಕರ್ತೆಯರು ಹಾಗೂ ಅಂಗನವಾಡಿಯ ಸಹಾಯಕಿಯರು ಹುದ್ದೆಗಳ ಸಂಖ್ಯೆ ಒಟ್ಟು 963 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅದರಲ್ಲಿ ಅಂಗನವಾಡಿಯ ಕಾರ್ಯಕರ್ತೆಯರು 263 ಹುದ್ದೆ ಅಂಗನವಾಡಿಯ ಸಹಾಯಕಿ ಯರು 700 ಹುದ್ದೆ ಖಾಲಿ ಇದೆ. ಉದ್ಯೋಗ. ಸ್ಥಳ, ಗದಗ, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆ ಗದಗ ಜಿಲ್ಲೆಯಲ್ಲಿ ಗದಗ, ಗಜೇಂದ್ರಗಡ, ಲಕ್ಷ್ಮೇಶ್ವರ, ಮುಂಡರಗಿ, ನರಗುಂದ ರೋಣ ಹಾಗೂ ಶಿರಾ ಟಿ ಯಾದಗಿರಿ ಜಿಲ್ಲೆಯಲ್ಲಿ ಶಹಾಪುರ, ಸುರಪುರ, ಯಾದಗಿರಿ ವಿಜಯನಗರ ಜಿಲ್ಲೆಯಲ್ಲಿ ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಹೊಸಪೇಟೆ, ಕೂಡ್ಲಿಗಿ, ಹರಪನಹಳ್ಳಿ ಹಾಗೂ ಕೊಟ್ಟೂರು ತಾಲೂಕಿನಲ್ಲಿ ಹುದ್ದೆಗಳು ಖಾಲಿ ಇದೆ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಂಗನವಾಡಿ ಸಹಾಯಕಿಯರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ದಿನಾಂಕ, ಗದಗ ಜಿಲ್ಲೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, 16 ಸೆಪ್ಟೆಂಬರ್ 2024. ಯಾದಗಿರಿ ಜಿಲ್ಲೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13 ಸಪ್ಟಂಬರ್ ಹಾಗೂ ಇನ್ನಿತರ ಬಗ್ಗೆ ನೀವು ಹೆಚ್ಚು ಮಾಹಿತಿಯನ್ನು ಪಡೆಯಬೇಕು ಎಂದರೆ ಹಾಗೂ ಅರ್ಜಿಯನ್ನು ಯಾರಿಗೆ ಸಲ್ಲಿಸಬೇಕು ಮತ್ತು ಹೇಗೆ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಗೆ ಈ ಕೆಳಗಿರುವ ಲಿಂಕನ್ನು ಓಪನ್ ಮಾಡಿಕೊಂಡು ನೋಡಿಕೊಳ್ಳಿ.