ಇರಲು ಸ್ವಂತ ಮನೆ ಇಲ್ಲದವರಿಗೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರಿಗೆ ನೂತನವಾಗಿ ಮೂರನೇ ಬಾರಿ ದೇಶದ ಪ್ರಧಾನಮಂತ್ರಿ ಗದ್ದುಗೆ ಏರಿದ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಇರುವ ಗ್ರಾಮೀಣ ಮತ್ತು ನಗರ ಭಾಗದ ನಿವೇಶನ ರಹಿತ ಬಡ ಕುಟುಂಬಗಳಿಗೆ ಭರ್ಜರಿ ಬಂಪರ್ ಗಿಫ್ಟ್ ಅನ್ನು ನೀಡಿದ್ದಾರೆ. ನೀವು ಕೂಡ ಸ್ವಂತ ಮನೆ ಇಲ್ಲದವರಾಗಿದ್ದಾರೆ ಅಥವಾ ಸ್ವಂತ ಜಾಗ ಇಲ್ಲದವರಾಗಿದ್ದರೆ ಅಥವಾ ಬಾಡಿಗೆ ಮನೆಯಲ್ಲಿ ವಾಸ ಮಾಡ್ತಾ ಇದ್ರೆ ಈ ಮಾಹಿತಿ ನಿಮಗೆ ಬಹಳ ಮುಖ್ಯವಾಗಿದೆ ಹಾಗು ದೇಶದ ಪ್ರಧಾನ ಮಂತ್ರಿಗಳಾದ ಶ್ರೀಯುತ ನರೇಂದ್ರ ಮೋದಿಯವರು ಬಡವರಿಗೆ ಮೊದಲ ಸಂಪುಟ ಸಭೆಯಲ್ಲಿಯೇ 3,00,00,000 ಮನೆಗಳ ನಿರ್ಮಾಣಕ್ಕೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿರುವುದು ಒಳ್ಳೆಯ ಕೆಲಸ.

ಹಾಗೂ ಕೇಂದ್ರ ಸರ್ಕಾರದಿಂದ ಯಾವಾಗ ಗ್ರಾಮೀಣ ಬಡವರಿಗೆ ಮತ್ತು ನಗರ ಪ್ರದೇಶದ ಬಡವರಿಗೆ ಮನೆಗಳು ಸಿಗುತ್ತವೆ ಮತ್ತು ಕೇಂದ್ರ ಸರ್ಕಾರದಿಂದ ಯಾವಾಗ ಮನೆಗಳು ಬಿಡುಗಡೆಯಾಗುತ್ತವೆ? ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು? ಅಗತ್ಯವಾದ ದಾಖಲೆಗಳನ್ನು ಈ ಎಲ್ಲ ಕಂಪ್ಲೀಟ್ ಮಾಹಿತಿಯನ್ನ ತಿಳಿದುಕೊಳ್ಳಲು ಕೊನೆವರೆಗೂ ನೋಡಿ. ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದಾರೆ. ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3,00,00,000 ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನ ಮೊದಲ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 3,00,00,000 ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿಯೇ ಸಂಪುಟ ಸಭೆ ನಡೆದಿದ್ದು, 30 ಸಂಪುಟ ದರ್ಜೆಯ ಸಚಿವರು ಐವರು ಸ್ವತಂತ್ರ ಖಾತೆ ನಿರ್ವಹಣೆ ಹಾಗೂ 31 ರಾಜ್ಯ ಖಾತೆ ಸಚಿವರು ಪಾಲ್ಗೊಂಡಿದ್ದರು. ಮೊದಲ ಸಂಪುಟ ಸಭೆ ಇಲ್ಲಿ ಬಡವರಿಗೆ ಅನುಕೂಲವಾಗುವ ದಿಸೆಯಲ್ಲಿ ನಿರ್ಧಾರವನ್ನ ಕೈಗೊಳ್ಳಲಾಗಿದ್ದು, ಇದಕ್ಕೆ ಎಲ್ಲ ಸಚಿವರು ಸಹಮತ ಸೂಚಿಸಿದರು. ಇದರೊಂದಿಗೆ ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ತೀರ್ಮಾನವನ್ನ ತೆಗೆದುಕೊಂಡಂತಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರು ಸ್ವಂತ ಮನೆ ಕನಸನ್ನ ನನಸು ಮಾಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ ಜಾರಿಗೆ ತಂದಿದೆ ಯೋಜನೆಯಡಿಯಲ್ಲಿ ಫಲಾನುಭವಿಗಳು ಬಯಲು ಪ್ರದೇಶದಲ್ಲಿ ಮನೆ ನಿರ್ಮಾಣ ಮಾಡಲು ಒಂದು 1.2 ಲಕ್ಷ ರೂಪಾಯಿ ಹಣ ಸಹಾಯ ಮಾಡಲಾಗುತ್ತದೆ. ಹಾಗೂ ಗುಡ್ಡಗಾಡು ಪ್ರದೇಶದಲ್ಲಿ ಮನೆ ನಿರ್ಮಾಣ ಮಾಡಲು 1.3 ಲಕ್ಷ ನೀಡಲಾಗುತ್ತದೆ.

Leave a Reply

Your email address will not be published. Required fields are marked *