ಕರ್ನಾಟಕ ಸರ್ಕಾರದ ಹೊಸ ಆದೇಶವೊಂದು ರೈತರ ಆತಂಕಕ್ಕೆ ಕಾರಣವಾಗಿದೆ. ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ ಎಂದು ಸರ್ಕಾರ ಆದೇಶ ಹೊರಡಿಸಿದೆ. ಹೌದು, ಇನ್ಮುಂದೆ ಸರ್ಕಾರದ ಸೌಲಭ್ಯವನ್ನ ಪಡೆಯಲು ಆರ್‌ಟಿಸಿಗೆ ಅಂದ್ರೆ ನಿಮ್ಮ ಜಮೀನಿನ ಪಹಣಿಗೆ ನಿಮ್ಮ ಆಧಾರ್ ಲಿಂಕ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ ಎಂದು ಸರ್ಕಾರ ಹೇಳಿದೆವಾಣಿಗೆ ಆಧಾರ್ ಜೋಡಣೆ ಮಾಡಲು ಅನುಕೂಲವಾಗುವಂತೆ ಸರ್ಕಾರ ಹೊಸದಾದ ತಂತ್ರಾಂಶವನ್ನ ಸಿದ್ಧಗೊಳಿಸಿದ್ದು.
ನೀವು ಆನ್‌ಲೈನ್‌ನಲ್ಲಿಯೂ ನಿಮ್ಮ ಪಹಣಿಗೆ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಬಹುದು ಹಾಗೂ ನಿಮ್ಮ ಗ್ರಾಮ ಆಡಳಿತಾಧಿಕಾರಿಗಳಿಗೆ ಭೇಟಿ ಮಾಡಿ ನಿಮ್ಮ ಜಮೀನಿನ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಬಹುದು. ಹೌದು, ಈ ಕುರಿತು ಪ್ರಕಟಣೆ ಮೂಲಕ ಮಾಹಿತಿಯನ್ನ ನೀಡಿದ್ದಾರೆ. ಈ ಕಡ್ಡಾಯವಾದ ಕಾರ್ಯವನ್ನು ಮಾಡಲು ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿದೆ.
ಸರ್ಕಾರದ ಸೌಲಭ್ಯಗಳನ್ನ ನೇರವಾಗಿ ಪಡೆಯಲು ಬ್ಯಾಂಕಿಂಗ್ ಸೌಲಭ್ಯಗಳನ್ನು ಪಡೆಯಲು ಮತ್ತು ಕೃಷಿ ಇಲಾಖೆ ಸೌಲಭ್ಯಗಳನ್ನು ಪಡೆಯಲು ಮತ್ತು ಬೆಳೆ ಪರಿಹಾರ ಪಡೆಯಲು ಜಮೀನಿನ ಉತಾರಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿರುತ್ತದೆ.
ಜಮೀನಿನ ಉತಾರ ಮತ್ತು ಆಧಾರ್ ಕಾರ್ಡ್ ತೆಗೆದುಕೊಂಡು ಗ್ರಾಮವನ್ನು ಕರ್ನಾಟಕವನ್ನು ಹಾಗು ಬೆಂಗಳೂರು ಆನ್‌ಲೈನ್ ಸೇವಾ ಕೇಂದ್ರಕ್ಕೆ ಭೇಟಿ ಮಾಡಿ ಹಾಗೂ ಗ್ರಾಮ ಅಥವಾ ಕಂದಾಯ ಆಡಳಿತ ಅಧಿಕಾರಿಗಳ ಕಚೇರಿಗೆ ಭೇಟಿ ಮಾಡಿ ಅತಿ ಹೆಚ್ಚು ಮಾಹಿತಿ ಪಡೆದು ನಿಮ್ಮ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಸೂಚಿಸಲಾಗಿದೆ. ಮುಖ್ಯವಾಗಿ ಆನ್‌ಲೈನ್‌ನಲ್ಲಿ ಪಹಣಿಗೆ ಆಧಾರ್ ಕಾರ್ಡ್ ಲಿಂಕ್.ಪಹಣಿಗಳಿಗೆ ಆಧಾರ್ ಲಿಂಕ್ ಏಕೆ? ಮಾಡಬೇಕು, ಆಧಾರ್ ಲಿಂಕ್ ಎಲ್ಲಿ ಮಾಡಿಸಬೇಕು? ಮೊಬೈಲ್ ನಲ್ಲೇ ಲಿಂಕ್ ಹೇಗೆ ಮಾಡುವುದು ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ.ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್ https://landrecords.karnataka.gov.in/s ervice4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ಕಂದಾಯ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನು ಮಾಡಲು ಮುಖ್ಯ ಉದ್ದೇಶ ಏನಂದರೆ ಹಲವಾರು ಯೋಜನೆಗಳನ್ನು ಜನರಿಗೆ ತಲುಪಲು ಸಹಾಯವಾಗಬೇಕು ಹಾಗೂ ಯಾವುದೇ ಕಾರಣಕ್ಕೂ ಮೋಸ ಆಗಬಾರದು ಎಂದು ಈ ಮುಖ್ಯ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಹಾಗಾಗಿ ನೀವು ಆದಷ್ಟು ಈ ಕೆಳಗಿನ ವಿಡಿಯೋವನ್ನು ಒಮ್ಮೆ ನೋಡಿದರೆ ನಿಮಗೆ ಸಂಪೂರ್ಣವಾದ ಮಾಹಿತಿ ಹಾಗೂ ಯಾವ ರೀತಿ ನಾವು ಲಿಂಕ್ ಮಾಡಬಹುದು ಎಂಬುದು ನಿಮಗೆ ದೊರೆಯುತ್ತದೆ.