ಏಳುನೇ ವೇತನ ಆಯೋಗ ಕುರಿತು ಈ ಬಾರಿಯ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಮಾರ್ಚ್‌ನಲ್ಲಿ ಏಳನೇ ವೇತನ ಆಯೋಗದ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಸೇರಿದೆ.ಏಳನೇ ವೇತನ ಆಯೋಗದ ವರದಿ ಜಾರಿಗಾಗಿ ರಾಜ್ಯ ಸರ್ಕಾರಿ ನೌಕರರು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ವರದಿ ಸಲ್ಲಿಕೆಯಾಗಿ ಮೂರು ತಿಂಗಳು ಕಳೆದಿದೆ. ಆದ್ರೆ ಸಂಪುಟ ಸಭೆಯಲ್ಲಿ ಈ ಬಗ್ಗೆ ಯಾವುದೇ ನಿರ್ಧಾರ ಅಥವಾ ಚರ್ಚೆ ಆಗದ ಬಗ್ಗೆ ಸರ್ಕಾರಿ ನೌಕರರು ಆಕ್ರೋಶ ಹೊರಹಾಕಿದ್ದಾರೆ. ಚುನಾವಣೆ ಬಳಿಕ ವರದಿ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಅವರು ಭರವಸೆ ನೀಡಿದರು ಆದರೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳದೆ ಇರುವುದು ನೌಕರಿಗೆ ತೀವ್ರ ನಿರಾಸೆಯಾಗಿದೆ ಎಂದು ನೌಕರರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಏಳನೇ ವೇತನ ಆಯೋಗದ ವರದಿ ಜಾರಿಯಾದರೆ ಬೊಕ್ಕಸಕ್ಕೆ ಬರೋಬ್ಬರಿ 17,000 ಕೋಟಿ ರೂಪಾಯಿ ಹೊರೆಯಾಗಲಿದೆ. ನೌಕರರ ವೇತನ ಹೆಚ್ಚಳ, ಪಿಂಚಣಿ ಸೇರಿ ಎಲ್ಲವೂ ಹೆಚ್ಚಾಗುವ ಕಾರಣ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗಲಿದ್ದು, ಈ ನಿಟ್ಟಿನಲ್ಲಿಯೂ ಸರ್ಕಾರ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳುತ್ತಿದೆ. ಕಾಂಗ್ರೆಸ್ ಸರ್ಕಾರ ತಮ್ಮ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಕೋಟ್ಯಾಂತರ ರೂಪಾಯಿ ಮೀಸಲಿಡುತ್ತದೆ. ಹೀಗಾಗಿ ವೇತನ ಆಯೋಗದ ಜಾರಿ ವಿಚಾರದಲ್ಲಿ ನಿಧಾನಗತಿ ಅನುಸರಿಸುತ್ತಿದೆ ಎಂಬ ಆರೋಪ ಕೂಡ ಕೇಳಿಬಂದಿದೆ. ರಾಜ್ಯ ಸರ್ಕಾರ ಈ ಕೂಡಲೇ ಶೇಕಡಾ 30 ರಷ್ಟು ವೇತನ ಹೆಚ್ಚಳ ಮಾಡಬೇಕು.

ಈ ಬಗ್ಗೆ ಉದಾಸೀನ ಧೋರಣೆ ಮುಂದುವರಿಯದಂತೆ ನೋಡಿಕೊಳ್ಳಬೇಕು ಎಂಬ ಆದೇಶವನ್ನು ಈಗಾಗಲೇ ಸರಕಾರ ನೀಡಿದೆ .30% ವೇತನ ಹೆಚ್ಚಳ ಮಾಡಬೇಕು ಎಂದು ಬೇಡಿಕೆ ಇಟ್ಟಿರುವ ನೌಕರರು ಏಳು ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಹೆಚ್ಚಳ ಮಾಡುವ ಕುರಿತು ಮುಂದಿನ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಒಂದು ವೇಳೆ ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ನೀತಿ ಸಂಹಿತೆ ತೆರವಾದ ತಕ್ಷಣ ಮೊದಲ ಸರ್ಕಾರ ನಮ್ಮ ಮನವಿಯನ್ನು ಪರಿಗಣಿಸಲಿದೆ.

ಆಯೋಗದ ವರದಿಯನ್ನು ಜಾರಿಗೆ ತರಲಿದೆ ಎಂದು ಕಾಯುತ್ತಿದ್ದರು.ಆದರೆ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಇರುವುದಕ್ಕೆ ಆಕ್ರೋಶ ಹೊರಹಾಕಿರುವ ನೌಕರರ ಸಂಘ ಎರಡು ವಾರಗಳಲ್ಲಿ ಈ ಬಗ್ಗೆ ಸಿದ್ದರಾಮಯ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದೆ. ಶೇಕಡಾ 30 ರಷ್ಟು ವೇತನ ಹೆಚ್ಚಳ ಮಾಡಬೇಕು.ರಾಜ್ಯ ಸರ್ಕಾರ ಈ ಕೂಡಲೇ ಶೇಕಡಾ 30 ರಷ್ಟು ವೇತನ ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ ಆದರೆ ಎಷ್ಟರ ಮಟ್ಟಿಗೆ ಸರಕಾರ ಇದಕ್ಕೆ ಸ್ಪಂಧಿಸುತ್ತದೆ ಎಂಬುದನ್ನು ನಾವು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *