ಕರ್ನಾಟಕ ವಿಧಾನಸಭೆಯಲ್ಲಿ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಯಾವ ಯಾವ ಹುದ್ದೆಗಳು ಮತ್ತು ಕೊನೆಯ ದಿನಾಂಕ ಯಾವ ಮತ್ತು ಎಷ್ಟು ಹುದ್ದೆಗಳಿವೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಅರ್ಜಿ ಸಲ್ಲಿಸಲು ವಯಸ್ಸಿನ ಅರ್ಹತೆಗಳು ಅರ್ಜಿ ಸ್ವೀಕರಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸಿನ ಮಿತಿಯನ್ನು ವರ್ಗಾವಾರು ಕೆಳಗಿನಂತೆ ತಿಳಿಸಲಾಗಿದೆ. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ. ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 41 ವರ್ಷ ವಯಸ್ಸು ದಾಟಿರಬಾರದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25-11-2024 ಅರ್ಜಿ ಸಲ್ಲಿಸಬೇಕಾದ ವಿಳಾಸ- ಕಾರ್ಯದರ್ಶಿ, ಕರ್ನಾಟಕ ವಿಧಾನ ಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು-560 001.
ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ ಇದೆ ನೋಡಿ.
ಕರ್ನಾಟಕ ವಿಧಾನ ಸಭೆ ಸಚಿವಾಲಯದ ನೇಮಕಾತಿ ಹಾಗೂ ಸೇವಾ ಷರತ್ತುಗಳು, ನಿಯಮಗಳು 2003ರ ಅನುಸಾರ ಮೇಲ್ಕಂಡ ಹುದ್ದೆಗಳ ಭರ್ತಿಗಾಗಿ ಅರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ವಿಧಾನ ಸಭೆ ಸಚಿವಾಲಯಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು. (ಅರ್ಜಿ ನಮೂನೆಯು ಸರ್ಕಾರಿ ಮುದ್ರಣಾಲಯದಲ್ಲಿ ದೊರೆಯುವುದು).