ಹತ್ತನೇ ತರಗತಿ, ಪಿಯುಸಿ ಹಾಗೂ ಪದವಿ ಪಾಸಾಗಿರುವ ಅಭ್ಯರ್ಥಿಗಳಿಂದ ಡಿಸಿಸಿ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆ ಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.
ವೇತನ, ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕ ಹುದ್ದೆಗೆ 43,100 ರಿಂದ 83000 ಕಿರಿಯ ಸಹಾಯಕ ಹುದ್ದೆಗೆ 30,350 ರಿಂದ 58,250.ವಾಹನ ಚಾಲಕರ ಹುದ್ದೆಗೆ 27,000 ರಿಂದ 52,000. ಅಟೆಂಡರ್ ಹುದ್ದೆಗೆ 23,200 ರಿಂದ 47,000, ಆರುನೂರ 50 ರ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.ಆಯ್ಕೆ ವಿಧಾನ ಲಿಖಿತ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳ ಶೇಕಡಾವಾರು ಆಧಾರದ ಮೇಲೆ ಒಂದಿಷ್ಟು ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ವಾಹನ ಚಾಲಕರ ಹುದ್ದೆಗೆ ಸಂದರ್ಶನಕ್ಕೆ ಮುಂಚಿತವಾಗಿ ನಾಲ್ಕು ಚಕ್ರ ಲಘು ವಾಹನ ಚಾಲನೆ ಕೌಶಲ್ಯ ಪರೀಕ್ಷೆ ನಡೆಸಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸ ಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಶುಲ್ಕ ಸಾಮಾನ್ಯ ಅರ್ಹತೆ ಪ್ರವರ್ಗ ಎರಡು ಎ, ಎರಡು ಬಿ, ಮೂರು ಎ, ಮೂರು ಬಿ ವರ್ಗದ ಅಭ್ಯರ್ಥಿಗಳು ₹1500 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು 750, ಅರ್ಜಿ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಹುದ್ದೆ ಹೆಸರು, ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕ, ಕಿರಿಯ ಸಹಾಯಕರು, ವಾಹನ ಚಾಲಕರು ಹಾಗೂ ಅಟೆಂಡರ್ ಹುದ್ದೆಗಳ ಸಂಖ್ಯೆ ಒಟ್ಟು 94 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅದರಲ್ಲಿ ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕ ಒಂದು ಹುದ್ದೆ ಕಿರಿಯ ಸಹಾಯಕರು 70 ವಾಹನ ಚಾಲಕರು, ಎರಡು ಹುದ್ದೆ ಅಟೆಂಡರ್ 21 ಹುದ್ದೆ ಖಾಲಿ ಇದೆ.ಉದ್ಯೋಗ, ಸ್ಥಳ, ಮಂಡ್ಯ ಜಿಲ್ಲೆ ವಿದ್ಯಾರ್ಹತೆ, ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಹುದ್ದೆಗೆ ಕಂಪ್ಯೂಟರ್ ಸೈನ್ಸ್ನಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಕಿರಿಯ ಸಹಾಯಕ ವಾಹನ ಚಾಲಕ ಹುದ್ದೆಗೆ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ ಜನವರಿ 20, 2024 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಫೆಬ್ರವರಿ 19, 2024 ಅರ್ಜಿ ತಿದ್ದುಪಡಿ ಮಾಡುವ ದಿನಾಂಕ ಫೆಬ್ರವರಿ 20, 2024 ರಿಂದ ಫೆಬ್ರವರಿ 29 2024